ಸನ್ನಡತೆ ಆಧಾರದಲ್ಲಿ ರಾಜ್ಯದ ವಿವಿಧ ಕಾರಾಗೃಹಗಳಿಂದ 169 ಖೈದಿಗಳ ಬಿಡುಗಡೆ
Update: 2022-03-11 21:08 IST
ಬೆಂಗಳೂರು, ಮಾ.11: ಸನ್ನಡತೆಯ ಆಧಾರದಲ್ಲಿ ಶಿಕ್ಷಾವಧಿ ಪೂರ್ವವಾಗಿ ರಾಜ್ಯದ ವಿವಿಧ ಕಾರಾಗೃಹಗಳಲ್ಲಿರುವ 169 ಖೈದಿಗಳನ್ನು ಶುಕ್ರವಾರ ಬಿಡುಗಡೆ ಮಾಡಲಾಯಿತು.
ಸನ್ನಡತೆಯ ಆಧಾರದಲ್ಲಿ ಖೈದಿಗಳನ್ನು ಬಿಡುಗಡೆ ಮಾಡುವ ಸಂಬಂಧ ರಾಜ್ಯ ಸರಕಾರ ಸಲ್ಲಿಸಿದ್ದ ಶಿಫಾರಸ್ಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿದ್ದ ಪ್ರಕಟಣೆಯನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸದನದ ಗಮನಕ್ಕೆ ತಂದರು.