×
Ad

ನಿಶ್ಚಿತಾರ್ಥಕ್ಕೆಂದು ಹೊರಟಿದ್ದ ಟ್ರ್ಯಾಕ್ಟರ್ ಪಲ್ಟಿ; ನಾಲ್ವರು ಮೃತ್ಯು, ಹಲವರಿಗೆ ಗಂಭೀರ ಗಾಯ

Update: 2022-03-11 21:22 IST

ಕನಕಗಿರಿ: ತಾಲೂಕು ನವಲಿ ಗ್ರಾಮದ ಬಳಿಯ ರೈಸ್ ಟೆಕ್ನಾಲಜಿ ಪಾರ್ಕ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟ ಘಟನೆ ನಡೆದಿದೆ.

ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಹೊರಟಿದ್ದ ಟ್ರ್ಯಾಕ್ಟರ್ ಇದ್ದಕ್ಕಿದ್ದಂತೆ ಪಲ್ಟಿಯಾಗಿ ಪರಿಣಾಮ ಸ್ಥಳದಲ್ಲೇ ಇಬ್ಬರು, ಆಸ್ಪತ್ರೆಯಲ್ಲಿ ಮತ್ತಿಬ್ಬರು ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಕಾರಟಗಿ ಪಟ್ಟಣದ 16ನೇ ವಾರ್ಡಿನ ನಿವಾಸಿಗಳಾದ ಯಮನೂರಪ್ಪ (55) ಮತ್ತು ಅಂಬಮ್ಮ (50) ಸ್ಥಳದಲ್ಲೇ ಮೃತಪಟ್ಟರೆ ದ್ಯಾವಮ್ಮ (60), ಶೇಷಪ್ಪ ಬಂಡಿ (40) ಕಾರಟಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಾರಟಗಿ ಆಸ್ಪತ್ರೆಗೆ ರವಾನಿಸಲಾಗಿದೆ. ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಇವರು ಕಾರಟಗಿಯಿಂದ ಕನಕಗಿರಿಗೆ ಟ್ರ್ಯಾಕ್ಟರ್‌ನಲ್ಲಿ ಹೊರಟಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಕನಕಗಿರಿ ಶಾಸಕ ಬಸವರಾಜ ದಡೇಸೂಗೂರು ಅವರ ಪುತ್ರ ಮೌನೇಶ ದಡೇಸೂಗೂರು ಅವರು ತಮ್ಮ ವಾಹನದಲ್ಲಿ ಗಾಯಾಳು ವ್ಯಕ್ತಿಗಳನ್ನು ಸಮೀಪದ ಕಾರಟಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ತಾವು ಕೂಡ ಆಸ್ಪತ್ರೆಗೆ ಹೋಗಿ ವೈದ್ಯರಿಗೆ ತಕ್ಷಣ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ನಾಲ್ಕು ಜನ ಮೃತಪಟ್ಟ ಸಂಬಂದಿಕರಿಗೆ ಸಾಂತ್ವನ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News