ರಾಜಭವನದಲ್ಲಿ ಎನ್‍ಸಿಸಿ ಕೆಡೆಟ್‍ಗಳಿಗೆ ರಾಜ್ಯಪಾಲ ಗೆಹ್ಲೋಟ್ ರಿಂದ ಅಭಿನಂದನೆ

Update: 2022-03-11 16:21 GMT

ಬೆಂಗಳೂರು, ಮಾ. 11: ರಾಷ್ಟ್ರೀಯ ಕೆಡೆಟ್ ಕಾಪ್ರ್ಸ್(ಎನ್‍ಸಿಸಿ) ಜೀವನದ ಎಲ್ಲಾ ಹಂತಗಳಲ್ಲಿ ನಾಯಕತ್ವದ ಗುಣಗಳನ್ನು ಹೊಂದಿರುವ ಸಂಘಟಿತ, ತರಬೇತಿ ಪಡೆದ ಮತ್ತು ಪ್ರೇರಿತ ಯುವಕರ ಸಮೂಹವನ್ನು ರಚಿಸುವ ಗುರಿಯನ್ನು ಹೊಂದಿದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ರಾಜ್‍ಪಥ್‍ನಲ್ಲಿ ನಡೆದ ಗಣರಾಜ್ಯೋತ್ಸವ ಸೇರಿದಂತೆ ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ರಾಷ್ಟ್ರೀಯ ಕೆಡೆಟ್ ಕಾಪ್ರ್ಸ್(ಎನ್‍ಸಿಸಿ) ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯ ಕೆಡೆಟ್‍ಗಳಿಗೆ ರಾಜಭವನದ ಗಾಜಿನಮನೆಯಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜನವರಿ 26 ರಂದು ಗಣರಾಜ್ಯೋತ್ಸವದ ಸಂದರ್ಭದಲ್ಲಿ ನವದೆಹಲಿಯ ರಾಜ್‍ಪಥ್‍ನಲ್ಲಿ ಆಯೋಜಿಸಲಾದ ಪರೇಡ್ ಮತ್ತು ಇತರ ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯ ಎನ್‍ಸಿಸಿ ಕೆಡೆಟ್‍ಗಳನ್ನು ರಾಜಭವನದಲ್ಲಿ ಅಭಿನಂದಿಸಲು ಅವಕಾಶ ದೊರಕಿರುವುದು ನನ್ನ ಸೌಭಾಗ್ಯ. ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ರಾಜಪಥದಲ್ಲಿ ನಿಮ್ಮ ಪ್ರದರ್ಶನ ಮತ್ತು ನಿಮ್ಮ ಅತ್ಯುತ್ತಮ ಕೊಡುಗೆಗಾಗಿ ನಾನು ಅಭಿನಂದಿಸುತ್ತೇನೆ ಎಂದು ಶುಭಹಾರೈಸಿದರು.

ಎನ್‍ಸಿಸಿಯಂತಹ ಯುವ ಸಂಘಟನೆಯಲ್ಲಿರುವುದು ಹೆಮ್ಮೆ ಮತ್ತು ಗೌರವದ ಸಂಗತಿ. ದೇಶದ ಅನೇಕ ಶಾಲೆಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಎನ್‍ಸಿಸಿಯ ವಿವಿಧ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ತರಬೇತಿ ನೀಡಲಾಗುತ್ತದೆ. ಅನೇಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ದೇಶ ಮತ್ತು ವಿಶ್ವದಲ್ಲಿ ಹೆಮ್ಮೆಪಡುವಂತೆ ಮಾಡಿದ್ದಾರೆ ಮತ್ತು ಅನೇಕ ಗೌರವಗಳು ಮತ್ತು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕೊರೋನಾ ಅವಧಿಯಲ್ಲಿಯೂ ಸಹ, ಎನ್‍ಸಿಸಿಯ ಯುವಕರು ತಮ್ಮ ಪ್ರಮುಖ ಸಾಮಾಜಿಕ ಕೊಡುಗೆಯನ್ನು ನೀಡಿದ್ದಾರೆ ಎಂದು ಶ್ಲಾಘಿಸಿದರು.

ನ್ಯಾಷನಲ್ ಕೆಡೆಟ್ ಕಾಪ್ರ್ಸ್ ಕರ್ನಾಟಕ ಮತ್ತು ಗೋವಾ ಡೆಪ್ಯುಟಿ ಡೈರೆಕ್ಟರ್ ಜನರಲ್ ಏರ್ ಕಮಾಂಡರ್ ಬಿ.ಎಸ್. ಕನ್ವರ್ ವಿ.ಎಸ್.ಎಂ. ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News