×
Ad

ಮೇ 21ರಂದು ಮಿತ್ತಬೈಲ್ ಮಖಾಂ ಉರೂಸ್ ; ಕಾರ್ಯಕ್ರಮಕ್ಕೆ ಚಾಲನೆ

Update: 2022-03-11 22:11 IST

ಬಂಟ್ವಾಳ, ಮಾ.11: ಮುಹಿಯ್ಯುದ್ದೀನ್ ಜುಮಾ ಮಸೀದಿ ಮಿತ್ತಬೈಲ್ ಇದರ ವಠಾರದಲ್ಲಿ ಅಂತ್ಯ ವಿಶ್ರಾಂತಿಗೊಳ್ಳುತ್ತಿರುವ ಹಝ್ರತ್ ಶೈಖ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಲ್ಲಿ ಪ್ರತೀ ಮೂರು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮೇ 21ರಂದು ನಡೆಯಲಿದೆ. 

ಉರೂಸ್ ಕಾರ್ಯಕ್ರಮದ ನೇತೃತ್ವವನ್ನು ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾ ಅಧ್ಯಕ್ಷ, ಮಿತ್ತಬೈಲ್ ಖಾಝಿ ಸೈಯದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ  ತಂಙಳ್ ವಹಿಸಲಿದ್ದಾರೆ. 

ಉರೂಸ್ ಪ್ರಯುಕ್ತ ಮೇ 14ರಿಂದ 21ರ ವರೆಗೆ ಧಾರ್ಮಿಕ ಮತ ಪ್ರಭಾಷಣ ಕಾರ್ಯಕ್ರಮ ನಡೆಯಲಿದ್ದು ಹಲವಾರು ವಾಗ್ಮಿಗಳು, ಉಲೆಮಾ ನೇತಾರರು, ಸಾದಾತ್ ಗಳು ಭಾಗವಹಿಸಲಿದ್ದಾರೆ ಎಂದು ಮಿತ್ತಬೈಲ್ ಜಮಾಅತ್ ಅಧ್ಯಕ್ಷ ಸಾಗರ್ ಮುಹಮ್ಮದ್ ಹಾಗೂ ಉರೂಸ್ ಕಮಿಟಿ ಅಧ್ಯಕ್ಷ ಅಹ್ಮದ್ ಬಾವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಉರೂಸ್ ಕಾರ್ಯಕ್ರಮಕ್ಕೆ ಶುಕ್ರವಾರ ದರ್ಗಾ ಝಿಯಾರತ್ ಹಾಗೂ ದ್ವಜಾರೋಹಣ ಮಾಡುವ ಮೂಲಕ ಮಿತ್ತಬೈಲ್ ಖತೀಬ್ ಅಶ್ರಫ್ ಫೈಝಿ ಚಾಲನೆ ನೀಡಿದರು. 

ಈ ಸಂದರ್ಭದಲ್ಲಿ ಇರ್ಷಾದ್ ದಾರಿಮಿ ಮಿತ್ತಬೈಲ್, ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಲಾಂ, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಫಲುಲ್ ತಂಙಳ್, ಕೋಶಾಧಿಕಾರಿ ಮುಹಮ್ಮದ್ ಅಲಿ, ಮಾಜಿ ಕಾರ್ಯದರ್ಶಿ ಅದ್ದೇಡಿ ಮುಹಮ್ಮದ್, ಉರೂಸ್ ಕಮಿಟಿ ಉಪಾಧ್ಯಕ್ಷ ಮುಹಮ್ಮದ್ ಮಜಲ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News