ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ: ತಡೆಯಾಜ್ಞೆ ವದಂತಿ ನಂಬಬೇಡಿ
Update: 2022-03-11 22:27 IST
ಬೆಂಗಳೂರು: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ಭಾಗವಾಗಿ ಮಾರ್ಚ್ 12ರಿಂದ 16ರವರೆಗೆ ನಿಗದಿಯಾಗಿರುವ ಸ್ಪರ್ಧಾತ್ಮಕ ಪರೀಕ್ಷೆಯು ಅಬಾಧಿತವಾಗಿ ಮತ್ತು ಕಟ್ಟುನಿಟ್ಟಾಗಿ ನಡೆಯಲಿದೆ.
ಈ ಸಂಬಂಧವಾಗಿ ಕೋರ್ಟ್ ತಡೆಯಾಜ್ಞೆ ನೀಡಿದೆ ಎನ್ನುವ ಆಧಾರರಹಿತ ವದಂತಿಯನ್ನು ಅಭ್ಯರ್ಥಿಗಳು ನಂಬಿ, ಮೋಸ ಹೋಗಬಾರದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಇ.ಡಿ ರಮ್ಯ ಅವರು ತಿಳಿಸಿದ್ದಾರೆ.
ಪರೀಕ್ಷೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಶುಕ್ರವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ಸಂಗತಿಗೆ ಸಂಬಂಧಿಸಿದಂತೆ ಅವರು ಈ ಸ್ಪಷ್ಟೀಕರಣ ನೀಡಿದೆ.