×
Ad

‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಗೆ ಸಚಿವ ಸುನೀಲ್ ಕುಮಾರ್ ಚಾಲನೆ

Update: 2022-03-12 12:11 IST

ಮಂಗಳೂರು : ಕಂದಾಯ ಇಲಾಖೆಯಿಂದ ಪಹಣಿ, ಅಟ್ಟಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ʼಕಂದಾಯ ದಾಖಲೆ ಮನೆಬಾಗಿಲಿಗೆʼ ಯೋಜನೆಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಮೂಡಬಿದ್ರೆ ತಾಲೂಕಿನ ಮೂಡಬಿದ್ರೆ ಹೋಬಳಿಯ ಪಡುಮಾರ್ನಾಡು ಗ್ರಾಮದಲ್ಲಿ ಶನಿವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಉಮನಾಥ್ ಕೊಟ್ಯಾನ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಜಿ.ಒಂ. ಸಿಇಒ ಡಾ. ಕುಮಾರ್,  ಸಹಾಯಕ ಆಯುಕ್ತ ಮದನ್ ಮೋಹನ್, ಮೂಡುಬಿದ್ರಿ ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News