ಪಂಚ ರಾಜ್ಯ ಚುನಾವಣೆಯಲ್ಲಿ ಹೀನಾಯ ಸೋಲು: ನಾಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
Update: 2022-03-12 15:59 IST
ಹೊಸದಿಲ್ಲಿ: ಪಂಚ ರಾಜ್ಯ ಚುನಾವಣೆಯಲ್ಲಿ ಹೀನಾಯ ಸೋಲಿನ ಮೂರು ದಿನಗಳ ನಂತರ ಕಾಂಗ್ರೆಸ್‌ನ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮಂಡಳಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಥವಾ ಸಿಡಬ್ಲ್ಯೂಸಿ ನಾಳೆ ಸಂಜೆ 4 ಗಂಟೆಗೆ ಸಭೆ ಸೇರಲಿದೆ.
ನಾಯಕತ್ವದ ಬಗ್ಗೆ ಹೊಸ ಪ್ರಶ್ನೆಗಳು ಎದ್ದಿರುವ ನಡುವೆ ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಆಂತರಿಕ ಚುನಾವಣೆಯನ್ನು ಬೇಗನೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.
ಗುರುವಾರ ಪ್ರಕಟವಾದ ರಾಜ್ಯ ಚುನಾವಣಾ ಫಲಿತಾಂಶಗಳಲ್ಲಿ ಕಾಂಗ್ರೆಸ್ ತೀವ್ರ ಹಿನ್ನಡೆ ಕಂಡಿತ್ತು. ಕಾಂಗ್ರೆಸ್ ನಿಯಂತ್ರಣದಲ್ಲಿದ್ದ ಕೊನೆಯ ಪ್ರಮುಖ ರಾಜ್ಯಗಳಲ್ಲಿ ಒಂದಾದ ಪಂಜಾಬ್ ಅನ್ನು ಆಮ್ ಆದ್ಮಿ ಪಕ್ಷ (ಎಎಪಿ)ಗೆದ್ದಕೊಂಡಿದೆ. ಇತರ ಮೂರು ರಾಜ್ಯಗಳಲ್ಲಿ ಪ್ರಬಲ ಹೋರಾಟವನ್ನು ನೀಡಲು ವಿಫಲವಾಗಿದ್ದು, ಉತ್ತರಾಖಂಡ, ಗೋವಾ ಮತ್ತು ಮಣಿಪುರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಕನಸು ಭಗ್ನವಾಗಿತ್ತು.