ಮಂಗಳೂರು: ಶಾಲಾ ಕಾಲೇಜು ಸುತ್ತ ನಿಷೇಧಾಜ್ಞೆ ಮುಂದುವರಿಕೆ
Update: 2022-03-12 18:36 IST
ಮಂಗಳೂರು : ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನಲೆಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿರುವ ಎಲ್ಲಾ ಶಾಲಾ ಕಾಲೇಜು ಹಾಗೂ ಇತರ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಈಗಾಗಲೇ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಅದನ್ನು ಮಾ.19ರವರೆಗೆ ಮುಂದುವರಿಸಲಾಗಿದೆ.
ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಆದೇಶ ಹೊರಡಿಸಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವಂತೆ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಸೆಕ್ಷನ್ ಜಾರಿ ಇರುವ ಪ್ರದೇಶಗಳಲ್ಲಿ ಗುಂಪು ಗುಂಪಾಗಿ ಒಡಾಡುವುದಕ್ಕೆ ಕಡಿವಾಣ ಹಾಕಲಾಗಿದೆ. ಅಲ್ಲದೆ ಬೊಬ್ಬೆ ಹಾಕುವುದು, ಭಿತ್ತಿ ಪತ್ರಗಳನ್ನು ಅಂಟಿಸುವು, ಶಸ್ತ್ರಾಸ್ತ್ರ, ದೊಣ್ಣೆ, ಲಾಠಿ ಇತ್ಯಾದಿಗಳೊಂದಿಗೆ ಒಡಾಡುವುದಕ್ಕೆ ಕಡಿವಾಣ ಹಾಕಲಾಗಿದೆ. ಅಲ್ಲದೆ ಪಟಾಕಿ ಸಿಡಿಸುವುದು, ಸೋಟಕಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.