ಸಾಲಿಗ್ರಾಮ: ನಿಷೇಧಿತ ಪ್ಲಾಸ್ಟಿಕ್ ಬಳಸಿದಲ್ಲಿ ದೂರು ದಾಖಲು
Update: 2022-03-12 18:53 IST
ಉಡುಪಿ : ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗಡಿ ಮಾಲಕರು ತಮ್ಮ ತಮ್ಮ ಅಂಗಡಿಯಲ್ಲಿ ಗ್ರಾಹಕರಿಗೆ ಕಾಣುವ ರೀತಿಯಲ್ಲಿ ಕಸದಬುಟ್ಟಿಯನ್ನು ಕಡ್ಡಾಯವಾಗಿ ಇಡಬೇಕು. ಹಾಗೂ ಸಾರ್ವಜನಿಕರು, ಅಂಗಡಿ ಮಾಲಕರು, ಸಗಟು ಮಾರಾಟಗಾರರು, ಚಿಲ್ಲರೆ ವ್ಯಾಪಾರಿ ಮತ್ತು ಮಾರಾಟಗಾರರು ಪರಿಸರಕ್ಕೆ ಹಾನಿಯುಂಟು ಮಾಡುವ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮತ್ತು ಮಾರಾಟ, ಸಂಗ್ರಹಣೆ, ಸಾಗಾಣಿಕೆ ಮಾಡಬಾರದು.
ತಪ್ಪಿದ್ದಲ್ಲಿ ಅಂತಹವರ ವಿರುದ್ಧ ಸೂಕ್ತ ದಂಡ ವಿಧಿಸಿ ಉದ್ಯಮ ಪರವಾನಿಗೆ ರದ್ದುಪಡಿಸಿ ಸಂಬಂಧಪಟ್ಟ ನ್ಯಾಯಾಲಯದಲ್ಲಿ ಪರಿಸರ ಸಂರಕ್ಷಣೆ ಕಾಯ್ದೆಯಡಿ ದೂರುಗಳನ್ನು ದಾಖಲಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಸಾಲಿಗ್ರಾಮ ಪಟ್ಟಣ ಪಂಚಾಯತ್ ಪ್ರಕಟಣೆ ತಿಳಿಸಿದೆ.