×
Ad

‌ಸೋನಿಯಾ, ರಾಹುಲ್‌, ಪ್ರಿಯಾಂಕಾ ಗಾಂಧಿ ರಾಜೀನಾಮೆ ವರದಿಯನ್ನು ಅಲ್ಲಗಳೆದ ಕಾಂಗ್ರೆಸ್

Update: 2022-03-12 20:41 IST

ಹೊಸದಿಲ್ಲಿ: ಪಂಚರಾಜ್ಯ ಚುನಾವಣಾ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನ ತಮ್ಮ ಸ್ಥಾನಗಳಿಗೆ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ನಾಳಿನ ಸಭೆಯಲ್ಲಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ndtv.com ನ ವರದಿಯನ್ನು ಕಾಂಗ್ರೆಸ್‌ ಅಲ್ಲಗಳೆದಿದೆ. ಇದು ಸತ್ಯಕ್ಕೆ ದೂರವಾದ ವಿಚಾರ ಎಂದು ಅದು ಹೇಳಿದೆ.

ಯಾವುದೇ ಮೂಲಗಳನ್ನು ಹೆಸರಿಸದೇ ಎನ್ಡಿಟಿವಿಯು ಕಾಂಗ್ರೆಸ್‌ ನಾಯಕರ ರಾಜೀನಾಮೆ ಸುದ್ದಿಯನ್ನು ಪ್ರಕಟಿಸಿರುವುದು ಸಂಪೂರ್ಣ ಅನ್ಯಾಯವಾಗಿದೆ ಮತ್ತು ತಪ್ಪಾಗಿದೆ. ಇಂತಹಾ ಆಧಾರರಹಿತ ಪ್ರಚಾರಗಳನ್ನು, ಕಥೆಗಳನ್ನು ಮಾಧ್ಯಮಗಳು ಪ್ರಸಾರ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್‌ ನ ರಣದೀಪ್‌ ಸಿಂಗ್‌ ಸುರ್ಜೇವಾಲ ಟ್ವೀಟ್‌ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News