×
Ad

ಗ್ರೂಪ್ ಸಿ ಹುದ್ದೆಗಳಿಗೆ ತಾಂತ್ರಿಕ ಕಾರಣದಿಂದಾಗಿ ಪರೀಕ್ಷೆ ನಿರಾಕರಣೆ

Update: 2022-03-12 23:09 IST

ಬೆಂಗಳೂರು: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಖಾಲಿಯಿದ್ದ ಗ್ರೂಪ್ ಸಿ ಹುದ್ದೆಗಳಿಗೆ ಶನಿವಾರ ಪರೀಕ್ಷೆಗಳನ್ನು ನಡೆಸಲಾಯಿತು. ಆದರೆ  ತಾಂತ್ರಿಕ ಕಾರಣ ಹೇಳಿ, ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳಿಗೆ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಿರಾಕರಿಸಲಾಗಿದೆ.

ನಗರದ ಯಳಚನಹಳ್ಳಿಯಲ್ಲಿರುವ ರೆವೆರೆಂಡ್ ಟೆಕ್ನೋಲಾಜಿಸ್ ಪ್ರೈ. ಲಿ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ನಿರಾಕರಣೆ ಮಾಡಿದ ಸಿಬ್ಬಂದಿ ವಿರುದ್ಧ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶನಿವಾರ ಮಧ್ಯಾಹ್ನ ಮೂರು ಗಂಟೆಗೆ ಆರಂಭವಾಗಬೇಕಿದ್ದ ಪರೀಕ್ಷೆ ಆರಂಭವಾಗಿಲ್ಲ. ಹೀಗಾಗಿ ಪರೀಕ್ಷಾ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವಿರುದ್ಧ ನೂರಾರು ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News