ಮೆಗಾ ರೋಡ್‌ ಶೋ ಮೊದಲು ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದ ಅರವಿಂದ ಕೇಜ್ರಿವಾಲ್, ಭಗವಂತ್ ಮಾನ್

Update: 2022-03-13 07:01 GMT

ಅಮೃತಸರ: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಗೆಲುವಿನ ಸಂಭ್ರಮಾಚರಣೆಗಾಗಿ ಪಂಜಾಬ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಭಗವಂತ್ ಮಾನ್ ಹಾಗೂ  ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಇಂದು ಅಮೃತಸರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋ ಆರಂಭಿಸುವ ಮುನ್ನ ನಾಯಕರು ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದರು.

ಶುಕ್ರವಾರ ಮೊಹಾಲಿಯಲ್ಲಿ ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಧುರಿ ಕ್ಷೇತ್ರದಿಂದ 58,000 ಮತಗಳಿಂದ ಗೆದ್ದಿರುವ ಮಾನ್ ಅವರನ್ನು ಎಎಪಿಯ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಯಿತು. ಮಾನ್ ಅವರು ಶನಿವಾರ ಚಂಡೀಗಢದ ರಾಜಭವನದಲ್ಲಿ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ ಸರಕಾರ ರಚನೆಗೆ ಹಕ್ಕು ಮಂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News