ಭಾರತದ ಭದ್ರತಾ ಸಿದ್ಧತೆ ಕುರಿತು ಪ್ರಧಾನಿ ಮೋದಿಯಿಂದ ಉನ್ನತ ಮಟ್ಟದ ಸಭೆ

Update: 2022-03-13 08:00 GMT

ಹೊಸದಿಲ್ಲಿ: ಭಾರತದ ಭದ್ರತಾ ಸನ್ನದ್ಧತೆ ಹಾಗೂ  ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷದ ಸಂದರ್ಭದಲ್ಲಿ ಚಾಲ್ತಿಯಲ್ಲಿರುವ ಜಾಗತಿಕ ಸನ್ನಿವೇಶವನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆಯನ್ನು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್.  ಜೈಶಂಕರ್ ಸಭೆಯಲ್ಲಿ ಭಾಗವಹಿಸಿದ್ದಾರೆ. ಎನ್‌ಎಸ್‌ಎ ಅಜಿತ್ ದೋವಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದಾರೆ.

ಇತ್ತೀಚಿಗೆ ಪಂಚ ರಾಜ್ಯ ಚುನಾವಣೆಗಳಲ್ಲಿ ಬಿಜೆಪಿಯ ಬೃಹತ್  ಗೆಲುವಿನ ನಂತರ ಗುರುವಾರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ರಷ್ಯಾ ಮತ್ತು ಉಕ್ರೇನ್ ಎರಡಕ್ಕೂ ಸಂಪರ್ಕದಲ್ಲಿರುವುದು ಭಾರತದ ಅಗತ್ಯಗಳು, ಆದರೆ ದೇಶವು ಶಾಂತಿಯ ಕಡೆಗಿದೆ ಮತ್ತು ಮಾತುಕತೆಯಲ್ಲಿ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ಇದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News