ಹಾಡಹಗಲೇ ಆದಿವಾಸಿ ಹುಡುಗಿಯ ಮೇಲೆ ಬೀದಿಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ ದುಷ್ಕರ್ಮಿಗಳ ಗುಂಪು: ವಿಡಿಯೋ ವೈರಲ್‌

Update: 2022-03-13 12:30 GMT

ಅಲಿರಾಜಪುರ: ಮಧ್ಯಪ್ರದೇಶದ ಅಲಿರಾಜಪುರ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರ ಮೇಲೆ ಯುವಕರ ಗುಂಪೊಂದು ಸಾರ್ವಜನಿಕವಾಗಿ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋ ವೈರಲ್ ಆದ ತಕ್ಷಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು AajTak ವರದಿ ಮಾಡಿದೆ.

ಈ ಘಟನೆ ವಾಲ್ಪುರ ಗ್ರಾಮದಲ್ಲಿ ನಡೆದಿದ್ದು, ʼಭಗೋರಿಯಾʼ  ಎಂಬ ಬುಡಕಟ್ಟು ಜಾತ್ರೋತ್ಸವ  ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ವೀಡಿಯೋ ಆಧರಿಸಿ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದರೊಂದಿಗೆ ವಿಡಿಯೋ ವೈರಲ್ ಮಾಡಿದ ವ್ಯಕ್ತಿಯನ್ನು ಕೂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಎಸ್ಪಿ ಅಲಿರಾಜಪುರ ಅವರೇ ವಾಲ್ಪುರ ಗ್ರಾಮಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಎಸ್‌ಪಿ ಹೇಳಿದ್ದಾರೆ.

ಶುಕ್ರವಾರ ಸಂಜೆಯಿಂದ ಈ ವಿಡಿಯೋ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರಲ್ಲಿ ಕೆಲವು ಅಪರಿಚಿತ ಕೇಸರಿ ಶಾಲು ಧರಿಸಿರುವ ಯುವಕರು ಜಾತ್ರೆಯಲ್ಲಿ 
ಆದಿವಾಸಿ ಹುಡುಗಿಯರೊಂದಿಗೆ ಬಹಿರಂಗವಾಗಿ ಅಶ್ಲೀಲ ಕೃತ್ಯಗಳನ್ನು ಎಸಗುತ್ತಿರುವ ದೃಶ್ಯಗಳು ಸೆರೆಯಾಗಿವೆ. ಈ ವಿಡಿಯೋವನ್ನು ಧಾರ್ ಗ್ರಾಮದ ಯುವಕನೊಬ್ಬ ಮಾಡಿದ್ದು, ಅಲಿರಾಜಪುರದ ಯುವಕನೊಬ್ಬ ಈ ವಿಡಿಯೋವನ್ನು ಅಂತರ್ಜಾಲದಲ್ಲಿ ವೈರಲ್ ಮಾಡಿದ್ದಾನೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News