ದ.ಕ.ಜಿಲ್ಲೆ: ಮೂವರಿಗೆ ಕೋವಿಡ್ ಸೋಂಕು
Update: 2022-03-13 19:12 IST
ಮಂಗಳೂರು : ದ.ಕ.ಜಿಲ್ಲೆಯಲ್ಲಿ ರವಿವಾರ ಮೂವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿವೆ. ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ೧,೩೫,೪೪೮ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು ೧,೩೩,೫೭೭ ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ ೨೩ ಸಕ್ರಿಯ ಪ್ರಕರಣವಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.೦.೧೮ ದಾಖಲಾಗಿದೆ. ಅಲ್ಲದೆ ಈವರೆಗೆ ೧೮೪೮ ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.