ಯುವಕ ನಾಪತ್ತೆ: ದೂರು
Update: 2022-03-13 19:44 IST
ಪುತ್ತೂರು: ಬಸ್ಸು ನಿಲ್ದಾಣದ ಬಳಿಯಲ್ಲಿ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ತಾರಿಗುಡ್ಡೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಸುಲೈಮಾನ್ ಆಸಿಫ್(27) ನಾಪತ್ತೆಯಾದ ಯುವಕ. ಈತ ಮಾ.7ರಂದು ಎಂದಿನಂತೆ ಮನೆಯಿಂದ ತಾನು ಕೆಲಸ ಮಾಡುತ್ತಿದ್ದ ಅಂಗಡಿಗೆಂದು ತೆರಳಿದ್ದು ಬಳಿಕ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದಾರೆ.
ಈತನ ತಾಯಿ ಹಾಜಿರಾ ಅವರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶೋಧಕಾರ್ಯ ನಡೆಸುತ್ತಿದ್ದಾರೆ.