×
Ad

ಉಕ್ರೇನ್‌ನಲ್ಲಿನ ರಾಯಭಾರಿ ಕಚೇರಿ ಪೋಲ್ಯಾಂಡ್‌ಗೆ ಸ್ಥಳಾಂತರ: ಭಾರತ

Update: 2022-03-13 21:37 IST
PHOTO COURTESY:TWITTER

ಹೊಸದಿಲ್ಲಿ, ಮಾ.13: ಯುದ್ಧಗ್ರಸ್ತ ಉಕ್ರೇನ್‌ನಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯನ್ನು ಗಮನಿಸಿ ಅಲ್ಲಿರುವ ರಾಯಭಾರಿ ಕಚೇರಿಯನ್ನು ತಾತ್ಕಾಲಿಕವಾಗಿ ನೆರೆದೇಶ ಪೋಲ್ಯಾಂಡ್‌ಗೆ ಸ್ಥಳಾಂತರಿಸಿರುವುದಾಗಿ ಭಾರತ ಸರಕಾರ ರವಿವಾರ ಹೇಳಿದೆ. ಉಕ್ರೇನ್‌ನಲ್ಲಿ, ಅದರಲ್ಲೂ ವಿಶೇಷವಾಗಿ ಉಕ್ರೇನ್‌ನ ಪಶ್ಚಿಮದ ಭಾಗದಲ್ಲಿ ಭದ್ರತಾ ಪರಿಸ್ಥಿತಿ ತೀವ್ರ ಹದಗೆಡುತ್ತಿರುವುದನ್ನು ಗಮನಿಸಿ ಅಲ್ಲಿಂದ ರಾಯಭಾರಿ ಕಚೇರಿಯನ್ನು ತಾತ್ಕಾಲಿಕವಾಗಿ ನೆರೆದೇಶ ಪೋಲ್ಯಾಂಡ್‌ಗೆ ಸ್ಥಳಾಂತರಿಸಲಾಗಿದೆ. ಮುಂದಿನ ಬೆಳವಣಿಗೆಯ ಆಧರಿಸಿ ಪರಿಸ್ಥಿತಿಯನ್ನು ಪರಾಮರ್ಶಿಸಲಾಗುವುದು ಎಂದು ಸರಕಾರದ ಹೇಳಿಕೆ ತಿಳಿಸಿದೆ.

ಉಕ್ರೇನ್‌ನಲ್ಲಿ ಮುಂದುವರಿದ ಸಂಘರ್ಷದ ಹಿನ್ನೆಲೆಯಲ್ಲಿ ಭಾರತದ ಭದ್ರತಾ ಸಿದ್ಧತೆಯ ಪರಾಮರ್ಶೆಗೆ ರವಿವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಉಕ್ರೇನ್‌ನಲ್ಲಿ ಭಾರತೀಯರನ್ನು ಅಲ್ಲಿಂದ ತೆರವುಗೊಳಿಸಲು ಸರಕಾರ ಹಮ್ಮಿಕೊಂಡಿರುವ ಆಪರೇಷನ್ ಗಂಗಾ ಕಾರ್ಯಕ್ರಮ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಧಿಕಾರಿಗಳು ಪ್ರಧಾನಿಗೆ ಮಾಹಿತಿ ನೀಡಿದರು ಎಂದು ಹೇಳಿಕೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News