ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಬರೀ ಹಗಲು ಗನಸು: ಶ್ರೀರಾಮುಲು ವ್ಯಂಗ್ಯ

Update: 2022-03-13 17:32 GMT

ಗದಗ, ಮಾ. 13: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರೂ ಸಿಎಂ ಹುದ್ದೆಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು, ಅವರು ಮುಖ್ಯಮಂತ್ರಿಯಾಗುವುದು ಹಗಲುಗನಸಾಗಿಯೇ ಉಳಿಯಲಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಲೇವಡಿ ಮಾಡಿದ್ದಾರೆ.

ರವಿವಾರ ಗದನಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್‍ನ ಎಲ್ಲ ಅಭ್ಯರ್ಥಿಗಳು ಸೋತಿದ್ದಾರೆ. ಎಲ್ಲೆಡೆ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಕರ್ನಾಟಕದಲ್ಲೂ ತನ್ನ ಅಸ್ತಿತ್ವಕ್ಕಾಗಿ ಹುಡುಕಾಡುತ್ತಿದೆ. ಕಾಂಗ್ರೆಸ್ ಪಕ್ಷ ಪಾರ್ಟ್ ಟೈಂ ಪಾರ್ಟಿ, ರಾಹುಲ್‍ಗಾಂಧಿ ಪಾರ್ಟ್ ಟೈಂ ಲೀಡರ್ ಆಗಲಿದ್ದಾರೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಅಜೆಂಡಾ ಇಲ್ಲ. ಕಾಂಗ್ರೆಸ್ ನಡೆಸುವ ಎಲ್ಲ ಹೋರಾಟಗಳು ನಾಟಕೀಯವಾಗಿವೆ. ಮಾಜಿ ಸಿಎಂ ಸಿದ್ಧರಾಮಯ್ಯ ಸ್ವಕ್ಷೇತ್ರ ಬಾದಾಮಿಯಲ್ಲಿ ಕಾಂಗ್ರೆಸ್ ಸದಸ್ಯತ್ವಕ್ಕೆ ಗಿಫ್ಟ್ ನೀಡುವ ಹೊಸ ಸಂಪ್ರದಾಯ ಹುಟ್ಟುಹಾಕಿದ್ದಾರೆ. ಅತೀ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿಸಿದವರಿಗೆ ಟಂಟಂ ಆಟೋ, ಬೈಕ್, ಟಿವಿ ಉಡುಗೊರೆ ನೀಡುವಂತಹ ದಯನೀಯ ಸ್ಥಿತಿಗೆ ತಲುಪಿದೆ. ಹೀಗಾಗಿ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದರೂ, ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದರು.

ಪ್ರಧಾನಿ ಮೋದಿ, ಅಮಿತ್ ಷಾ ಹಾಗೂ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ದೇಶದಾದ್ಯಂತ ಬಿಜೆಪಿ ವಿಜಯ ಪತಾಕೆ ಹಾರಿಸುತ್ತಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿಗೆ ಸ್ಪಷ್ಟ ಜನಾಶೀರ್ವಾದ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಒಕ್ಕಲೇಬ್ಬಿಸಬೇಡಿ: ಇದೇ ವೇಳೆ ಕೆಲೂರ ಗ್ರಾಮದ ರೈತ ಮಹಿಳೆ ಆತ್ಮಹತ್ಶೆ ಪ್ರಕರಣ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಸಚಿವರು, ಅರಣ್ಶ ಜಮೀನಿನಲ್ಲಿ ಒಕ್ಕಲುತನ ಮಾಡುವವರನ್ನು ಒಕ್ಕಲೇಬ್ಬಿಸಬಾರದು. ಸುಮಾರು 20-30 ವರ್ಷಗಳಿಂದ ಒಕ್ಕಲುತನ ಮಾಡುತ್ತಿದ್ದರೇ, ಅಂತವರಿಗೆ ಸಾಗುವಳಿ ಚೀಟಿ ನೀಡಬೇಕೆಂದು ಸುಪ್ರೀಂ ಕೋರ್ಟ್ ಸ್ಪಷ್ಟ ಸಂದೇಶ ನೀಡಿದೆ. ಮುಂದೆ ಈ ರೀತಿ ಘಟನೆಗಳು ಮರುಕಳಿಸಬಾರದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೆನೆ. ನಿರ್ಮಲಾ ಕುಟುಂಬಕ್ಕೆ ಸರಕಾರ ಈಗಾಗಲೇ ಪರಿಹಾರ ಧನ ನೀಡಿದೆ.

ಪರಿಶಿಷ್ಟ ಪಂಗಡಗಳ ಇಲಾಖೆಯಿಂದ ರೈತ ಮಹಿಳೆಯ ಕುಟುಂಬಕ್ಕೆ ಎರಡು ಎಕರೆ ಜಮೀನು ಹಾಗೂ ಗಂಗಾ ಕಲ್ಶಾಣ ಯೋಜನೆಯಲ್ಲಿ ಒಂದು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News