ಹಿರಿಯೂರು; ರಸ್ತೆ ಅಪಘಾತಕ್ಕೆ ಮಹಿಳೆ ಸೇರಿ ಇಬ್ಬರು ಬಲಿ, ಹತ್ತು ಮಂದಿಗೆ ಗಾಯ
Update: 2022-03-14 10:27 IST
ಹಿರಿಯೂರು (ಚಿತ್ರದುರ್ಗ): ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಟೆಂಪೊ ಟ್ರಾವೆಲರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಸುಮಾರು 10 ಮಂದಿ ಗಾಯಗೊಂಡ ಘಟನೆ ಕೆ.ಆರ್.ಹಳ್ಳಿ ಗೇಟ್ ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಶ್ವೇತಾ (24) ಎಂದು ಗುರುತಿಸಲಾಗಿದೆ. ಮತ್ತೊಬ್ಬರ ಗುರುತು ಇನ್ನಷ್ಟೆ ಪತ್ತೆಯಾಗಬೇಕಿದೆ. ಸುಮಾರು ಹತ್ತು ಮಂದಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.