ಕುದ್ರೋಳಿ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
Update: 2022-03-14 14:02 IST
ಮಂಗಳೂರು: ನಗರದ ಕುದ್ರೋಳಿ ದೇವಸ್ಥಾನಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸೋಮವಾರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಪೋಲಿಸ್ ಆಯುಕ್ತ ಶಶಿಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಡಿಸಿಪಿ ಹರಿರಾಂ ಶಂಕರ್ ಹಾಗೂ ಇತರ ಅಧಿಕಾರಿಗಳು, ದೇವಸ್ಥಾನದ ಅಧ್ಯಕ್ಷರಾದ ಸಾಯಿರಾಂ, ಕಾರ್ಯದರ್ಶಿ ಮಾಧವ ಸುವರ್ಣ ಇದ್ದರು.