ಹಾಡಹಗಲೇ ಆದಿವಾಸಿ ಮಹಿಳೆಯರಿಗೆ ಲೈಂಗಿಕ ಕಿರುಕುಳ: 15 ಆರೋಪಿಗಳ ಬಂಧನ

Update: 2022-03-14 14:18 GMT

ಅಲಿರಾಜ್‌ಪುರ: ಬುಡಕಟ್ಟು ಉತ್ಸವದ ವೇಳೆ ಇಬ್ಬರು ಆದಿವಾಸಿ ಮಹಿಳೆಯರ ಮೇಲೆ ಸಾರ್ವಜನಿಕವಾಗಿ ಲೈಂಗಿಕ ಕಿರುಕುಳ ನೀಡಿರುವ ಘಟನೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಅಲಿರಾಜ್‌ಪುರ ಪೊಲೀಸರು ಒಟ್ಟು ಹದಿನೈದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು IndiaToday.in ವರದಿ ಮಾಡಿದೆ.

ಆರೋಪಿಗಳು ಇಬ್ಬರು ಮಹಿಳೆಯರಿಗೆ ಸಾರ್ವಜನಿಕವಾಗಿ ಲೈಂಗಿಕ ಕಿರುಕುಳ ನೀಡಿ, ಎಳೆದಾಡಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ, ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದರು. 

ಪೊಲೀಸರು ಹದಿನೈದು ಆರೋಪಿಗಳನ್ನು ಗುರುತಿಸಿ ಬಂಧಿಸಿದ್ದಾರೆ, ಆದರೆ ಇನ್ನೂ ಸಂತ್ರಸ್ತೆಯರ ವಿವರ ಪತ್ತೆಯಾಗಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿದೆ.

ಬಂಧಿತರೆಲ್ಲರೂ 19 ರಿಂದ 25 ವರ್ಷದೊಳಗಿನ ಯುವಕರಾಗಿದ್ದು, ಎಲ್ಲಾ ಆರೋಪಿಗಳನ್ನು ಗುರುತಿಸಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ಶುಕ್ರವಾರದಿಂದ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಘಟನೆ ವಾಲ್ಪುರ ಗ್ರಾಮದಲ್ಲಿ ನಡೆದಿದ್ದು, ʼಭಗೋರಿಯಾʼ  ಎಂಬ ಬುಡಕಟ್ಟು ಜಾತ್ರೋತ್ಸವ  ವೇಳೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News