ಅಪಘಾತ: ಗಾಯಾಳು ಯುವಕ ಮೃತ್ಯು
Update: 2022-03-14 21:41 IST
ಬೈಂದೂರು : ಗೊಳಿಹೊಳೆ ಅಂಗನವಾಡಿ ಕೇಂದ್ರದ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಸೈಕಲ್ ಸವಾರರೊಬ್ಬರು ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಮೃತರನ್ನು ಆಶಿಷ್(21) ಎಂದು ಗುರುತಿಸಲಾಗಿದೆ. ಜು.14ರಂದು ಶಾಲೆಗೆ ಹೋಗಿ ವಾಪಾಸು ಬರುತ್ತಿದ್ದ ಇವರ ಸೈಕಲ್‌ಗೆ ಬೈಕ್ ಢಿಕ್ಕಿ ಹೊಡೆದಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಆಶಿಷ್, ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಆ.24ರಂದು ಬಿಡುಗಡೆ ಹೊಂದಿದ್ದರು. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಆಶಿಷ್, ಮಾ.13ರಂದು ಬೆಳಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.