ಜಮ್ಮು: ಸಿಲಿಂಡರ್‌ ಸ್ಪೋಟ; ನಾಲ್ವರು ಸಾವು, 15 ಮಂದಿಗೆ ಗಾಯ

Update: 2022-03-14 17:37 GMT
Photo; Twitter//jammu_now

ಜಮ್ಮು: ಸೋಮವಾರ ಸಂಜೆ ಜಮ್ಮುವಿನಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ. ಜಮ್ಮುವಿನ ರೆಸಿಡೆನ್ಸಿ ರಸ್ತೆಯಲ್ಲಿರುವ ಗುಜರಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದು ಕ್ರಮೇಣ ಪಕ್ಕದ ಕಟ್ಟಡಗಳಿಗೆ ವ್ಯಾಪಿಸಿದೆ.

ಗ್ಯಾಸ್ ಸಿಲಿಂಡರ್ ಸ್ಫೋಟದ ನಂತರ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿರುವುದಾಗಿ ndtv.com ವರದಿ ಮಾಡಿದೆ.

ನಾಲ್ಕು ಜನರು ಬೆಂಕಿಯಲ್ಲಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ತೀವ್ರ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸಂತ್ರಸ್ತರ ಕುಟುಂಬಗಳಿಗೆ ₹ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

 "ಜಮ್ಮು ಎಲ್‌ಪಿಜಿ ಸಿಲಿಂಡರ್ ಸ್ಫೋಟ ಘಟನೆಯಲ್ಲಿ ಮೃತರ ಕುಟುಂಬಗಳಿಗೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು. ಗಂಭೀರವಾಗಿ ಗಾಯಗೊಂಡವರಿಗೆ ₹ 1 ಲಕ್ಷ ಮತ್ತು ಸಣ್ಣಪುಟ್ಟ ಗಾಯಗೊಂಡವರಿಗೆ ₹ 25,000 ಪರಿಹಾರ ನೀಡಲಾಗುವುದು," ಎಂದು J&K ಲೆಫ್ಟಿನೆಂಟ್ ಗವರ್ನರ್ ಕಚೇರಿ ಟ್ವೀಟ್ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News