ಭಾರತದಿಂದ ಆಕಸ್ಮಿಕ ಕ್ಷಿಪಣಿ ಉಡಾವಣೆ ಪ್ರಕರಣದ ಬಗ್ಗೆ ಅಮೆರಿಕ ಪ್ರತಿಕ್ರಿಯಿಸಿದ್ದು ಹೀಗೆ...

Update: 2022-03-15 03:37 GMT
ಸಾಂದರ್ಭಿಕ ಚಿತ್ರ

ವಾಷಿಂಗ್ಟನ್‌: ತಾಂತ್ರಿಕ ಅಸಮರ್ಪಕತೆಯಿಂದ ಭಾರತದ ಕ್ಷಿಪಣಿ ಆಕಸ್ಮಿಕವಾಗಿ ಉಡಾವಣೆಗೊಂಡು ಪಾಕಿಸ್ತಾನದ ಪ್ರದೇಶದಲ್ಲಿ ಬಿದ್ದಿದ್ದ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಅಮೆರಿಕ, ಇದು ಆಕಸ್ಮಿಕವಾಗಿ ನಡೆದ ಘಟನೆ ಎಂದು ಹೇಳಿದೆ.

ಭಾರತ ಕ್ಷಿಪಣಿ ಉಡಾಯಿಸಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅಮೆರಿಕದ ವಕ್ತಾರ ನೆಡ್‌ ಪ್ರೈಸ್‌, "ಆಕಸ್ಮಿಕವಾಗಿ ನಡೆದ ಘಟನೆಯನ್ನು ಹೊರತು ಪಡಿಸಿ ಪಾಕ್‌ ಮೇಲೆ ಭಾರತ ಕ್ಷಿಪಣಿ ಉಡಾಯಿಸಿರುವ ಯಾವುದೇ ಸೂಚನೆಗಳಿಲ್ಲ ಎಂದು ಅವರು ತಿಳಿಸಿದ್ದಾರೆ.

ಘಟನೆ ಬಗ್ಗೆ ವಸ್ತುನಿಷ್ಠ ತನಿಖೆ ನಡೆಯಬೇಕೆಂದು ಎಂಬ ಚೀನಾ ಒತ್ತಾಯದ ಬೆನ್ನಲ್ಲೇ ಅಮೆರಿಕದಿಂದ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.

"ಮಾರ್ಚ್‌ 9ರಂದು ಭಾರತ ಘಟನೆಯ ಬಗ್ಗೆ ನಿಖರವಾಗಿ ಏನು ನಡೆಯಿತು ಎಂದು ಸ್ಪಷ್ಟನೆ ನೀಡಿದೆ. ಇದಕ್ಕಿಂತ ಹೆಚ್ಚಿನ ಪ್ರತಿಕ್ರಿಯೆಯನ್ನು ನಾವು ನೀಡುವುದಿಲ್ಲ" ಎಂದು ಪ್ರೈಸ್‌ ಹೇಳಿದ್ದಾರೆ.

ಭಾರತದ ಕಡೆಯಿಂದ ಆಕಸ್ಮಿಕವಾಗಿ ಉಡಾವಣೆಗೊಂಡ ಕ್ಷಿಪಣಿಯೊಂದು ಪಾಕಿಸ್ತಾನಕ್ಕೆ ಸೇರಿದ ಪ್ರದೇಶದಲ್ಲಿ ಬಿದ್ದಿದ್ದು, ಇದು 'ತಾಂತ್ರಿಕ ಅಸಮರ್ಪಕತೆಯಿಂದಾಗಿ' ಆದ ಘಟನೆ. ಇದಕ್ಕಾಗಿ ತೀವ್ರ ವಿಷಾದ ವ್ಯಕ್ತಪಡಿಸುವುದಾಗಿ ರಕ್ಷಣಾ ಸಚಿವಾಲಯ ಹೇಳಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News