×
Ad

ಮಾ. 22ರಂದು ಟೋಲ್ ಗೇಟ್ ಚಲೋ: ಮುನೀರ್ ಕಾಟಿಪಳ್ಳ

Update: 2022-03-15 12:09 IST

ಮುಲ್ಕಿ : ಎನ್ಐಟಿಕೆ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆಸಲುದ್ದೇಶಿಸಿದ್ದ ಟೋಲ್ ಗೇಟ್ ಚಲೋ ಪಾದಯಾತ್ರೆ ಮಾ.22 ರಂದು ನಡೆಯಲಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕರಾದ ಮುನೀರ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

ಹಿಜಾಬ್ ತೀರ್ಪಿನ ಹಿನ್ನೆಲೆಯಲ್ಲಿ  ದ.ಕ., ಉಡುಪಿ ಜಿಲ್ಲೆಯಾದ್ಯಂದ ಸೆ. 144 ಅಡಿ ಜಿಲ್ಲಾಡಳಿತ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ಟೋಲ್ ಗೇಟ್ ಹೋರಾಟ ಸಮಿತಿ ಮುಂದೂಡಿದೆ.

ಈ ಹಿನ್ನೆಲೆಯಲ್ಲಿ ಇಂದು ಹೆಜಮಾಡಿ ಟೋಲ್‌ಗೇಟ್ ನ ಪಾದಯಾತ್ರೆ ಆರಂಭದ ಸ್ಥಳದಲ್ಲಿ ಸಮಿತಿಯ ಮುಖಂಡರು ಹಾಗೂ ವಿವಿಧ ಸಂಘಟನೆಗಳ‌ ಮುಖಂಡರು ಸಭೆ ನಡೆಸಿ ಮಾ.22 ರಂದು ಪಾದಯಾತ್ರೆಯನ್ನು  ನಡೆಸುವುದಾಗಿ ತೀರ್ಮಾಸಲಾಗಿದೆ ಎಂದು ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News