VIDEO- ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು: ಸಚಿವ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಹೀಗೆ ...
Update: 2022-03-15 12:32 IST
ಶಿವಮೊಗ್ಗ: ಕರ್ನಾಟಕ ಉಚ್ಚ ನ್ಯಾಯಲಯ ಹಿಜಾಬ್ ಕುರಿತು ನೀಡಿರುವ ತೀರ್ಪು ಸ್ವಾಗತಾರ್ಹ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ತೀರ್ಪು ಎಲ್ಲ ಗೊಂದಲಗಳಿಗೂ ತೆರೆ ಎಳೆದಿದೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು ಎಂದು.
ಹಿಜಾಬ್ ಧರಿಸಬೇಕು ಎಂದು ಶಾಲೆಯಿಂದ ದೂರವುಳಿದಿರುವ ವಿದ್ಯಾರ್ಥಿನಿಯರು ಕೂಡಲೆ ಶಾಲೆಗೆ ತೆರಳಬೇಕು ಎಂದು ಕೋರುತ್ತೇನೆ
ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.