ಕೋರ್ಟ್ ತೀರ್ಪು ಎಲ್ಲರೂ ಪಾಲಿಸಬೇಕು, ಕರಾವಳಿಯಲ್ಲಿ ಕೋಮು ಸೌಹಾರ್ದಕ್ಕೆ ಯಾವುದೇ ಧಕ್ಕೆಯಿಲ್ಲ: ಯು.ಟಿ. ಖಾದರ್
Update: 2022-03-15 13:50 IST
ಬೆಂಗಳೂರು: ಹೈಕೋರ್ಟ್ ತೀರ್ಪನ್ನು ಎಲ್ಲ ಸಮುದಾಯಗಳೂ ಗೌರವಿಸುತ್ತವೆ. ಕರಾವಳಿಯಲ್ಲಿ ಕೋಮು ಸೌಹಾರ್ದಕ್ಕೆ ಯಾವುದೇ ಧಕ್ಕೆಯಿಲ್ಲ ಎಂದು ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ತಿಳಿಸಿದ್ದಾರೆ.
ಈ ಕರಿತು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರಾವಳಿ ಭಾಗದ ಕೆಲವೊಂದು ಕಾಲೇಜುಗಳಲ್ಲಿ ಮಾತ್ರ ಹಿಜಾಬ್ ವಿಚಾರಕ್ಕೆ ಸಮಸ್ಯೆ ಉಂಟಾಗಿತ್ತು. ಉಳಿದಂತೆ ಯಾವುದೇ ಕಾಲೇಜುಗಳಲ್ಲಿ ಸಮಸ್ಯೆ ಇರಲಿಲ್ಲ ಮತ್ತು ಈಗಲೂ ಸಮಸ್ಯ ಇಲ್ಲ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಅದರಲ್ಲೂ ಹೆಣ್ಣು ಮಕ್ಕಳಿಗೆ ಶಿಕ್ಷಣ ಮುಖ್ಯ. ಶಾಲಾ ಮಟ್ಟದಲ್ಲಿ ಬಗೆಹರಿಸಬಹುದಾಗಿದ್ದ ಸಮಸ್ಯೆ ಕೋರ್ಟ್ವರೆಗೆ ಬರಬೇಕಾದ ಅಗತ್ಯ ಇರಲಿಲ್ಲ. ಈಗ ಹೈಕೋರ್ಟ್ ತೀರ್ಪು ಬಂದಿದ್ದು, ಕೋರ್ಟ್ ತೀರ್ಪು ಎಲ್ಲರೂ ಪಾಲಿಸಬೇಕು. ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶ ಇರುವುದರಿಂದ ಅದರ ಬಗ್ಗೆ ಚಿಂತನೆ ನಡೆಸಬಹುದು ಎಂದು ಹೇಳಿದರು.