×
Ad

ಹಿಜಾಬ್‌ ವಿವಾದವು ಸಮಾಜದ ಅಶಾಂತಿಗೆ 'ಕಾಣದ ಕೈಗಳು' ಕೆಲಸ ಮಾಡಿದೆಯೆಂಬ ವಾದಕ್ಕೆ ಅವಕಾಶ ಮಾಡಿಕೊಟ್ಟಿದೆ: ಹೈಕೋರ್ಟ್‌

Update: 2022-03-15 18:08 IST

ಬೆಂಗಳೂರು: ಹಿಜಾಬ್‌ ವಿವಾದವು ಸಾಮಾಜಿಕ ಅಶಾಂತಿ ಉಂಟು ಮಾಡಲು ಕಾಣದ ಕೈಗಳು ಕೆಲಸ ಮಾಡುತ್ತಿವೆ ಎಂಬ ವಾದಕ್ಕೆ ಅವಕಾಶ ನೀಡಿದೆ ಎಂದು ಕರ್ನಾಟಕ ಹೈ ಕೋರ್ಟ್‌ ಮಂಗಳವಾರ ಹೇಳಿದೆ.  

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೀಠವು ಹಿಜಾಬ್ ಅನ್ನು ಪ್ರಶ್ನಿಸುವ ವಿವಿಧ ಅರ್ಜಿಗಳನ್ನು ವಜಾಗೊಳಿಸುವಾಗ ಈ ಅಭಿಪ್ರಾಯವನ್ನು ನೀಡಿದೆ.

 ಹಿಜಾಬ್ ವಿವಾದವು ಆರಂಭವಾಗಿರುವ ವಿಧಾನವು ಸಾಮಾಜಿಕ ಅಸ್ಥಿರತೆ ಮತ್ತು ಅಶಾಂತಿ ಸೃಷ್ಟಿಸಲು ಕೆಲವು 'ಕಾಣದ ಕೈಗಳು' ಕೆಲಸ ಮಾಡುತ್ತಿವೆ ಎಂಬ ವಾದಕ್ಕೆ ಅವಕಾಶ ನೀಡುತ್ತದೆ ಎಂದು ಆದೇಶದಲ್ಲಿ ಹೇಳಿದೆ.  

 ಶೈಕ್ಷಣಿಕ ಅವಧಿಯ ಮಧ್ಯದಲ್ಲಿ ಅದು ಹೇಗೆ ಇದ್ದಕ್ಕಿದ್ದಂತೆ ಹಿಜಾಬ್‌ನ ಸಮಸ್ಯೆಯನ್ನು ಹುಟ್ಟುಹಾಕುತ್ತದೆ ಎಂದು ನಾವು ದಿಗ್ಭ್ರಮೆಗೊಂಡಿದ್ದೇವೆ ಎಂದು ಕರ್ನಾಟಕ ಹೈಕೋರ್ಟ್ ಆದೇಶ ಹೇಳಿದೆ.

ಹೆಚ್ಚು ನಿರ್ದಿಷ್ಟಪಡಿಸುವ ಅಗತ್ಯವಿಲ್ಲ. ನಡೆಯುತ್ತಿರುವ ಪೊಲೀಸ್ ತನಿಖೆಯ ಮೇಲೆ ಪರಿಣಾಮ ಬೀರುವಂತೆ ನಾವು ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಕೋರ್ಟ್‌ ಹೇಳಿದೆ. ಮುಚ್ಚಿದ ಕವರ್‌ನಲ್ಲಿ ಒದಗಿಸಲಾದ ಪೊಲೀಸ್ ದಾಖಲೆಗಳ ಪ್ರತಿಗಳನ್ನು ಪರಿಶೀಲಿಸಿ, ಹಿಂದಿರುಗಿಸಲಾಗಿದೆ ಎಂದು ಕೋರ್ಟ್‌ ಹೇಳಿದೆ. ಈ ವಿಷಯದ ಬಗ್ಗೆ ತ್ವರಿತ ಮತ್ತು ಪರಿಣಾಮಕಾರಿ ತನಿಖೆಗಾಗಿ ನ್ಯಾಯಾಲಯವು ತನ್ನ ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದು, ಅಪರಾಧಿಗಳನ್ನು ಕಾನೂನು ಕ್ರಮಕ್ಕೆ ತರಲು ಯಾವುದೇ ವಿಳಂಬವನ್ನು ಮಾಡಬಾರದು ಎಂದು ಉಲ್ಲೇಖಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News