×
Ad

ಹಿಜಾಬ್ ಕುರಿತ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ

Update: 2022-03-15 18:46 IST

ಬೆಂಗಳೂರು: ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ ಎಂದು ಎಎನ್ ಐ ವರದಿ ಮಾಡಿದೆ.

ವಕೀಲ ಅನಸ್‌ ತನ್ವೀರ್‌ರವರು ವಿಶೇಷ ರಜಾಕಾಲದ ಅರ್ಜಿಯನ್ನು ಸಲ್ಲಿಸಿದ್ದಾರೆ.

ಹಿಜಾಬ್ ಪರ ಸಲ್ಲಿಸಿದ್ದ ಎಲ್ಲ ರಿಟ್ ಅರ್ಜಿಗಳನ್ನು ಮಂಗಳವಾರ ಹೈಕೋರ್ಟ್ ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಇದೀಗ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಲಾಗಿದೆ.

ಮತ್ತೊಂದು ಕಡೆ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಾದವನ್ನೂ ಆಲಿಸಬೇಕೆಂದು ಹಿಂದೂ ಸೇನಾದವರು ಸುಪ್ರೀಂಕೋರ್ಟ್‍ಗೆ ಕೇವಿಯಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News