×
Ad

ಉತ್ತಮ ಜೀವನ ಶೈಲಿಯಿಂದ ಕಾಯಿಲೆ ದೂರ: ಡಾ.ಕೀರ್ತಿ

Update: 2022-03-15 20:18 IST

ಉಡುಪಿ : ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲೇ ಇದ್ದು, ಉತ್ತಮ ಅಭ್ಯಾಸ, ಹವ್ಯಾಸ ಮತ್ತು ಜೀವನ ಶೈಲಿಯಿಂದ ಹಲವಾರು ಕಾಯಿಲೆಗಳಿಂದ ದೂರ ಇರಬಹುದು ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸರ್ಟಿಪೈಡ್ ಮೆಡಿಕಲ್ ಅಫೀಸರ್ ಮತ್ತು ನುರಿತ ಪ್ರಥಮ ಚಿಕಿತ್ಸಾ ತರಬೇತುದಾರ ಡಾ.ಕೀರ್ತಿ ಹೇಳಿದ್ದಾರೆ.

ನಗರದ ಪೂರ್ಣಪ್ರಜ್ಞ ಕಾಲೇಜು ಆಡಿಟೋರಿಯಂ ಹಾಲ್‌ನಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಶಾಖೆ ಮತ್ತು ಯುವ ರೆಡ್‌ಕ್ರಾಸ್ ಘಟಕ ಪೂರ್ಣ ಪ್ರಜ್ಞ ಕಾಲೇಜು ಉಡುಪಿ ಇವರ ಸಹಯೋಗದೊಂದಿಗೆ ನಡೆದ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಧುನಿಕ ಜೀವನಶೈಲಿಯಿಂದ ಉಂಟಾಗುವ ಕ್ಯಾನ್ಸರ್ ಕಾಯಿಲೆಯ ಅಪಾಯಗಳು ಹೆಚ್ಚಿದ್ದು, ಮದ್ಯಪಾನ, ಧೂಮಪಾನ ಹಾಗೂ ದೈಹಿಕ ಚಟುವಟಿಕೆ ಕೊರತೆಯಿಂದ ಹೆಚ್ಚು ತೂಕದವರ ಕೊಬ್ಬಿನ ಅಂಶದಿಂದ ಕ್ಯಾನ್ಸರ್‌ಗಳು ಬರುವ ಅಪಾಯವಿದೆ. ಮದ್ಯಪಾನ ಸೇವನೆ ಕಡಿಮೆ ಮಾಡುವ ಮೂಲಕ ಕ್ಯಾನ್ಸರ್‌ನಂತಹ ಅಪಾಯಕಾರಿ ಕಾಯಿಲೆಗಳಿಂದ ಪಾರಾಗಬಹುದು ಎಂದರು.

ಅಧ್ಯಕ್ಷತೆಯನ್ನು ಪೂರ್ಣಪ್ರಜ್ಞ ಕಾಲೇಜು ಪ್ರಾಂಶುಪಾಲ ಡಾ. ರಾಘವೇಂದ್ರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಿ. ರತ್ನಾಕರ ಶೆಟ್ಟಿ, ಯುವ ರೆಡ್ ಕ್ರಾಸ್ ಘಟಕದ ಸಂಯೋಜನಾಧಿಕಾರಿ ಡಾ. ರಂಗಸ್ವಾಮಿ ಹಾಗೂ ಇತರರು  ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News