×
Ad

ಹಿಜಾಬ್ ಕುರಿತ ಹೈಕೋರ್ಟ್ ತೀರ್ಪು ತೃಪ್ತಿ ತಂದಿಲ್ಲ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ

Update: 2022-03-15 21:09 IST

ಉಡುಪಿ : ಹಿಜಾಬ್ ಕುರಿತ ಹೈಕೋರ್ಟ್ ತೀರ್ಪನ್ನು ನಾವು ಗೌರವಿಸುತ್ತೇವೆ. ಆದರೆ ಈ ಆದೇಶ ನಮಗೆ ತೃಪ್ತಿಕರವಾಗಿಲ್ಲ. ತುಂಬಾ ನೋವಿನ ಸಂಗತಿಯಾಗಿದೆ ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ ತಿಳಿಸಿದ್ದಾರೆ.

ಹೈಕೋರ್ಟ್ ಹೇಳಿರುವಂತೆ ಹಿಜಾಬ್ ಧಾರ್ಮಿಕವಾಗಿ ಅಗತ್ಯ ಭಾಗವಲ್ಲ ಎಂದು. ಇದು ಖಂಡಿತವಾಗಿಯೂ ತಪ್ಪು ಮಾಹಿತಿ ಆಗಿದೆ. ಧಾರ್ಮಿಕವಾಗಿ ಹಿಜಾಬ್ ಹಾಕುವಂತಹ ನಮ್ಮ ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ನಾವು ನ್ಯಾಯಕ್ಕಾಗಿ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು. ಅಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದರು.

ಹೈಕೋರ್ಟ್ ಆದೇಶಕ್ಕೆ ಸಂಬಂಧಿಸಿ ನಮ್ಮ ಸಮುದಾಯದ ಯಾರು ಕೂಡ ಉದ್ವೇಕಕ್ಕೆ ಒಳಗಾದೆ ಸಮಾಜದಲ್ಲಿ ಶಾಂತಿ ಕಾಪಾಡಬೇಕು ಎಂದು ಇಬ್ರಾಹಿಂ ಸಾಹೇಬ್ ಕೋಟ ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News