ದ.ಕ.ಜಿಲ್ಲೆ: ಬುಧವಾರದಿಂದ ಎಂದಿನಂತೆ ಶಿಕ್ಷಣ ಸಂಸ್ಥೆಗಳು ಕಾರ್ಯಾಚರಣೆ
Update: 2022-03-15 21:24 IST
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಬುಧವಾರ (ಮಾ.16)ದಿಂದ ಎಲ್ಲಾ ಶಾಲಾ ಮತ್ತು ಕಾಲೇಜುಗಳು ಎಂದಿನಂತೆ ಕಾರ್ಯಾಚರಣೆ ನಡೆಸಲಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ರಾಜ್ಯ ಹೈಕೋರ್ಟ್ ಹಿಜಾಬ್‌ಗೆ ಸಂಬಂಧಿಸಿದಂತೆ ಮಂಗಳವಾರ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ದ.ಕ.ಜಿಲ್ಲೆಯ ಶಾಲೆ ಮತ್ತು ಕಾಲೇಜು ಸಹಿತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಸಾರಲಾಗಿತ್ತು. ನಗರ ಸಹಿತ ಜಿಲ್ಲಾದ್ಯಂತ ಸೆ.೧೪೪ ಜಾರಿಗೊಳಿಸಲಾಗಿತ್ತು. ಅಲ್ಲದೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮಂಗಳವಾರ ಎಲ್ಲೂ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಎಲ್ಲೆಡೆ ಪರಿಸ್ಥಿತಿ ಶಾಂತಿಯುತವಾಗಿತ್ತು.
ಬುದವಾರದಿಂದ ಜಿಲ್ಲೆಯ ಎಲ್ಲಾ ಸರಕಾರಿ, ಖಾಸಗಿ ಸಹಿತ ಪ್ರಾಥಮಿಕ, ಪೂರ್ವ ಪ್ರಾಥಮಿಕ ಮತ್ತು ಅಂಗನವಾಡಿ ಕೇಂದ್ರಗಳಲ್ಲದೆ ಕಾಲೇಜುಗಳು ಕೂಡ ತೆರೆಯಲಿದೆ ಎಂದು ಡಿಸಿ ತಿಳಿಸಿದ್ದಾರೆ.