ಬಿಎಂಟಿಸಿ ಟಿಕೆಟ್ ರಹಿತ ಪ್ರಯಾಣಿಕರಿಂದ 4.91 ಲಕ್ಷ ದಂಡ ವಸೂಲಿ
Update: 2022-03-15 22:50 IST
ಬೆಂಗಳೂರು, ಮಾ.15: ಟಿಕೆಟ್ ಪಡೆಯದೆ ಅನಧಿಕೃತವಾಗಿ ಬಿಎಂಟಿಸಿ ಬಸ್‍ಗಳಲ್ಲಿ ಸಂಚರಿಸುವವರಿಂದ ಸಂಸ್ಥೆಯ ಆದಾಯದ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ನಗರದಾದ್ಯಂತ ಸಂಚರಿಸುವ ವಾಹನಗಳನ್ನು ತಪಾಸಣೆ ಮಾಡಿದ ತಂಡಗಳು 2022ರ ಫೆಬ್ರವರಿ ತಿಂಗಳಲ್ಲಿ 3325 ಟಿಕೇಟ್ ರಹಿತ ಪ್ರಯಾಣಿಕರಿಂದ ಒಟ್ಟು 491141 ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1042 ಪ್ರಕರಣಗಳನ್ನು ದಾಖಲಿಸಲಾಗಿದೆ.
ಮಹಿಳಾ ಪ್ರಯಾಣಿಕರಿಗೆಂದೆ ಮೀಸಲಾಗಿರುವ ಅಸನಗಳಲ್ಲಿ ಕುಳಿತು ಪ್ರಯಾಣಿಸಿರುವ 228 ಪುರುಷ ಪ್ರಯಾಣಿಕರಿಂದ ಒಟ್ಟು 22,800 ರೂ, ಮೋಟಾರು ವಾಹನ ಕಾಯ್ದೆ 988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ.
ಒಟ್ಟಾರೆ ಫೆಬ್ರವರಿ 2022ರ ಮಾಹೆಯಲ್ಲಿ 3553 ಪ್ರಯಾಣಿಕರಿಂದ ಒಟ್ಟು 5,13,911 ರೂ. ದಂಡ ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಬಿಎಂಟಿಸಿ ಬಸ್‍ಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್ ದಿನದ/ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸಬೇಕು.