ಕಾಂಗ್ರೆಸ್‌ ಅಧ್ಯಕ್ಷೆಯ ಸೂಚನೆಯ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಿಧು ರಾಜೀನಾಮೆ

Update: 2022-03-16 05:53 GMT

ಅಮೃತಸರ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಪಂಚರಾಜ್ಯ ಚುನಾವಣೆಗಳಲ್ಲಿ ಹೀನಾಯವಾಗಿ ಸೋತಿರುವ ಐದು ರಾಜ್ಯಗಳಲ್ಲಿ ಪಕ್ಷದ ಮುಖ್ಯಸ್ಥರನ್ನು ವಜಾಗೊಳಿಸಿದ ಒಂದು ದಿನದ ಬಳಿಕ, ಪಕ್ಷದ ಪಂಜಾಬ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

"ಕಾಂಗ್ರೆಸ್ ಅಧ್ಯಕ್ಷರ ಅಪೇಕ್ಷೆಯಂತೆ ನಾನು ನನ್ನ ರಾಜೀನಾಮೆಯನ್ನು ಕಳುಹಿಸಿದ್ದೇನೆ" ಎಂದು ಅವರು ಸೋನಿಯಾ ಗಾಂಧಿಗೆ ಬರೆದ ಪತ್ರದ ಪ್ರತಿಯೊಂದಿಗೆ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ನಿನ್ನೆ ಟ್ವೀಟ್ ಮಾಡಿದ್ದು, ರಾಜ್ಯ ಕಾಂಗ್ರೆಸ್ ಘಟಕಗಳ "ಪುನರ್ಸಂಘಟನೆಗೆ ಅನುಕೂಲವಾಗುವಂತೆ" ರಾಜೀನಾಮೆಗಳನ್ನು ಕೇಳಲಾಗಿದೆ ಎಂದಿದ್ದರು.

"ಕಾಂಗ್ರೆಸ್ ಅಧ್ಯಕ್ಷೆ, ಶ್ರೀಮತಿ ಸೋನಿಯಾ ಗಾಂಧಿಯವರು ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದ ಪಿಸಿಸಿ ಅಧ್ಯಕ್ಷರನ್ನು ಪಕ್ಷದ ಮರುಸಂಘಟನೆಗೆ ಅನುಕೂಲವಾಗುವಂತೆ ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದಾರೆ" ಎಂದು ಅವರು ಹೇಳಿದ್ದರು.

ಪಕ್ಷದ ಸೋಲಿನ ನಂತರ ಮಾಧ್ಯಮದೊಂದಿಗಿನ ಮೊದಲ ಮಾತುಕತೆಯಲ್ಲಿ ಸಿಧು, ಆಮ್ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಬದಲಾವಣೆಯನ್ನು ತರಲು "ಅತ್ಯುತ್ತಮ" ನಿರ್ಧಾರವನ್ನು ಮಾಡಿದ್ದಕ್ಕಾಗಿ ಪಂಜಾಬ್‌ನ ಜನರನ್ನು ಶ್ಲಾಘಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News