ನಿರ್ದೇಶಕ, ನಟ ಎಸ್. ನಾರಾಯಣ್ ಕಾಂಗ್ರೆಸ್ ಸೇರ್ಪಡೆ
Update: 2022-03-16 11:32 IST
ಬೆಂಗಳೂರು: ಕನ್ನಡದ ಖ್ಯಾತ ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ನಟ ಎಸ್. ನಾರಾಯಣ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಎಸ್. ನಾರಾಯಣ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಇದೇ ವೇಳೆ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ ಸೇರ್ಪಡೆಯಾದರು.
ಈ ಕುರಿತು ಪ್ರತಿಕ್ರಿಯಿಸಿರುವ ಡಿ.ಕೆ ಶಿವಕುಮಾರ್, 'ಎಸ್. ನಾರಾಯಣ್ ಅವರು ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿಕೊಂಡು ಸೇರ್ಪಡೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ತಮ್ಮ ವಾಣಿಜ್ಯ ಮಂಡಳಿ ಸೇರಿದಂತೆ ಪಕ್ಷ ಸಂಘಟನೆ ಮಾಡಲಿದ್ದಾರೆ' ಎಂದರು.
2023ಕ್ಕೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ಪಕ್ಷಕ್ಕಾಗಿ ದುಡಿಯುತ್ತೇನೆ, ಕೊಟ್ಟಿರುವ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ' ಎಂದು ಇದೇ ವೇಳೆ ನಿರ್ದೇಶಕ ಎಸ್. ನಾರಾಯಣ್ ಪ್ರತಿಕ್ರಿಯಿಸಿದರು.