ಪಂಜಾಬ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಭಗವಂತ್‌ ಮಾನ್

Update: 2022-03-16 08:24 GMT

ಖಟ್ಕರ್ ಕಲಾನ್, ಪಂಜಾಬ್: ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮಸ್ಥಳವಾದ ಖಟ್ಕರ್ ಕಲಾನ್‌ನಲ್ಲಿ ಆಮ್‌ ಆದ್ಮಿ ಪಕ್ಷದ ಭಗವಂತ್ ಮಾನ್ ಇಂದು ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ಹಿರಿಯ ಆಮ್ ಆದ್ಮಿ ಪಕ್ಷದ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.

ಮುಖ್ಯಮಂತ್ರಿಯಾಗಿ ತಮ್ಮ ಚೊಚ್ಚಲ ಭಾಷಣದಲ್ಲಿ, ಭಗವಂತ್ ಮಾನ್ ರಾಜ್ಯದಲ್ಲಿ ಭ್ರಷ್ಟಾಚಾರವನ್ನು ತೊಡೆದುಹಾಕಲು ಮತ್ತು ಉದ್ಯೋಗಗಳನ್ನು ಸೃಷ್ಟಿಸುವ ಭರವಸೆ ನೀಡಿದರು. "ನಾನು ಇಂದು ಯಾರನ್ನೂ ತಿರಸ್ಕರಿಸುವುದಿಲ್ಲ, ನಾನು ಪಂಜಾಬ್‌ನಲ್ಲಿ ಪ್ರತಿಯೊಬ್ಬರಿಗೂ ಮುಖ್ಯಮಂತ್ರಿಯಾಗಿದ್ದೇನೆ, ನಮ್ಮ ಪಕ್ಷಕ್ಕೆ ಮತ ಹಾಕದವರೂ ಸಹ" ಎಂದು ಅವರು ಹೇಳಿದರು.

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು 117 ಸ್ಥಾನಗಳ ವಿಧಾನಸಭೆಯಲ್ಲಿ 92 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ದಾಖಲಿಸಿದೆ. ಸಂಗ್ರೂರ್ ಜಿಲ್ಲೆಯ ಧುರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾನ್ ಅವರು ಕಾಂಗ್ರೆಸ್‌ನ ದಲ್ವಿರ್ ಸಿಂಗ್ ಗೋಲ್ಡಿ ವಿರುದ್ಧ 58,206 ಮತಗಳ ಅಂತರದಿಂದ ಗೆದ್ದಿದ್ದರು.

48 ವರ್ಷದ ಮಾನ್ 1970 ರ ನಂತರ ರಾಜ್ಯದ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿದ್ದಾರೆ. ಅವರಿಗೆ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News