×
Ad

ಕರ್ನಾಟಕ ಅಲ್ಪಸಂಖ್ಯಾತ ಇಲಾಖೆಯ ಅಧ್ಯಕ್ಷರಾಗಿ ಮುಸ್ಲಿಮರ ನೇಮಕ ಪ್ರಶ್ನಿಸಿ ಅರ್ಜಿ: ಸುಪ್ರೀಂಕೋರ್ಟ್‌ನಿಂದ ನೋಟೀಸ್

Update: 2022-03-16 17:36 IST

ಹೊಸದಿಲ್ಲಿ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರನ್ನು ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯದಿಂದ ಮಾತ್ರ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಎಸ್‌ಎಲ್‌ಪಿ ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಲಾಖೆಗೆ ಬುಧವಾರ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ಅನಿರುದ್ಧ ಬೋಸ್ ಅವರ ಪೀಠವು ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಲ್ಪಸಂಖ್ಯಾತ ಸಮುದಾಯದ ಅನಿಲ್ ಆಂಟೋನಿ ಸಲ್ಲಿಸಿದ ಎಸ್‌ಎಲ್‌ಪಿ (ವಿಶೇಷ ರಜಾಕಾಲ ಅರ್ಜಿ) ಸಂಬಂಧಿಸಿ ನೋಟಿಸ್ ಜಾರಿ ಮಾಡಿದೆ.

ಅರ್ಜಿದಾರರ ಪರ ವಕೀಲ ಜಿ.ಎಸ್.ಮಣಿ ವಾದ ಮಂಡಿಸಿದರು.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ಮೊದಲಿನಿಂದಲೂ ಮತ್ತು ಇಲ್ಲಿಯವರೆಗೆ ಇತರ ಅಲ್ಪಸಂಖ್ಯಾತ ಸಮುದಾಯಗಳಿಗೆ ಯಾವುದೇ ಸಮಾನ ಭಾಗವಹಿಸುವಿಕೆ ಮತ್ತು ಪ್ರಾತಿನಿಧ್ಯವನ್ನು ನೀಡದೆ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯದಿಂದ ಮಾತ್ರ ಆಯ್ಕೆ ಮಾಡಲಾಗುತ್ತಿದೆ ಎಂದು ಎಸ್‌ಎಲ್‌ಪಿಯಲ್ಲಿ ವಾದ ಮಂಡಿಸಲಾಯಿತು.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾದ ಎಎಸ್ ಓಕಾ (ಈಗ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಉನ್ನತೀಕರಿಸಲಾಗಿದೆ) ಮತ್ತು ಸಚಿನ್ ಶಂಕರ್ ಮಗದುಮ್ ಅವರ ಪೀಠವು ಜನವರಿ 18, 2021 ರಂದು ಕ್ರೈಸ್ತರು, ಸಿಖ್‌ಗಳು, ಪಾರ್ಸಿಗಳು, ಜೈನ ಮತ್ತು ಬೌದ್ಧರ ಸದಸ್ಯರನ್ನು ಸಹ ಅಧ್ಯಕ್ಷರನ್ನಾಗಿ ನೇಮಿಸುವಂತೆ ಆಂಟನಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News