×
Ad

ಜಗಜೀವನ ರಾಂ, ಅಂಬೇಡ್ಕರ್ ಪ್ರಶಸ್ತಿಗೆ ಪ್ರಸ್ತಾವನೆ ಆಹ್ವಾನ

Update: 2022-03-16 18:11 IST

ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ೨೦೨೨-೨೩ನೇ ಸಾಲಿನ ಡಾ.ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿಗಳಿಗೆ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗೆ ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳು ಮೇಲ್ಕಂಡ ಪ್ರಶಸ್ತಿಗೆ ಪ್ರಸ್ತಾವನೆಗಳನ್ನು ಮಾರ್ಚ್ ೧೮ರೊಳಗೆ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ, ಕುಂದಾಪುರ ಮತ್ತು ಕಾರ್ಕಳ ಕಚೇರಿಯನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News