×
Ad

ವಸತಿ ಯೋಜನೆ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2022-03-16 21:17 IST

ಬೆಂಗಳೂರು, ಮಾ.16: ರಾಜ್ಯದ ವಿವಿಧ ವಸತಿ ಯೋಜನೆಗಳಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಲು ನಿಗದಿಪಡಿಸಿದ್ದ ಆದಾಯ ಮಿತಿಯನ್ನು ಸರಕಾರ ಹೆಚ್ಚಳ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆಗೆ ಈ ಹಿಂದೆ ಇದ್ದ ಆದಾಯ ಮಿತಿಯನ್ನು 32 ಸಾವಿರ ರೂ.ಗಳಿಂದ 1.20 ಲಕ್ಷ ರೂ.ಗಳಿಗೆ ಹಾಗೂ ನಗರ ಪ್ರದೇಶಗಳಲ್ಲಿ 87 ಸಾವಿರ ರೂ.ಗಳಿಂದ 2 ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News