ಉಡುಪಿ : ಅಪರ ಜಿಲ್ಲಾಧಿಕಾರಿಯಾಗಿ ವೀಣಾ ಅಧಿಕಾರ ಸ್ವೀಕಾರ
Update: 2022-03-16 21:33 IST
ಉಡುಪಿ : ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ ಹಾಗೂ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಅಡಳಿತಾಧಿಕಾರಿಯಾಗಿದ್ದ ವೀಣ್ ಬಿ.ಎನ್. ಅವರನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಉಡುಪಿಯ ಅಪರ ಜಿಲ್ಲಾಧಿಕಾರಿಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ವರ್ಗಾಯಿಸಲಾಗಿದೆ.
ವೀಣಾ ಅವರು ಉಡುಪಿಯಲ್ಲಿ ಈವರೆಗೆ ಅಪರ ಜಿಲ್ಲಾಧಿಕಾರಿಯಾಗಿದ್ದ ಸದಾಶಿವ ಪ್ರಭು ಅವರಿಂದ ಇಂದು ಅಧಿಕಾರ ಸ್ವೀಕರಿಸಿದ್ದಾರೆ.