ಅಸ್ಸಾಂ: ಅತ್ಯಾಚಾರ ಆರೋಪಿ ಪೊಲೀಸರ ಗುಂಡಿಗೆ ಬಲಿ

Update: 2022-03-16 18:00 GMT

ಗುವಾಹತಿ, ಮಾ. 16: ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದ ಪ್ರಧಾನ ಆರೋಪಿ ಕಸ್ಟಡಿಯಿಂದ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಗುಂಡಿಗೆ ಬಲಿಯಾಗಿದ್ದಾನೆ.

ಪೊಲೀಸರು ಆರೋಪಿಯನ್ನು ತನಿಖೆಗಾಗಿ ಮಂಗಳವಾರ ಘಟನೆ ನಡೆದ ಸ್ಥಳಕ್ಕೆ ಕರೆದುಕೊಂಡು ಬಂದಿದ್ದರು. ಈ ಸಂದರ್ಭ ಆರೋಪಿ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಆರೋಪಿಯನ್ನು ಗುವಾಹತಿಯ ವೈದ್ಯಕೀಯ ಕಾಲೇಜು ಆಸ್ಪತ್ರೆ (ಜಿಎಂಸಿಎಚ್)ಗೆ ಕರೆತರಲಾಯಿತು. ಆದರೆ, ಅದಾಗಲೇ ಅತ ಮೃತಪಟ್ಟಿದ್ದ ಎಂದು ಅವರು ತಿಳಿಸಿದ್ದಾರೆ.

ಆತನನ್ನು ಮುಂಜಾನೆ 1 ಗಂಟೆಗೆ ಆಸ್ಪತ್ರೆಗೆ ಕರೆ ತರಲಾಗಿತ್ತು. ಆತನ ದೇಹದೊಳಗೆ ನಾಲ್ಕು ಗುಂಡುಗಳು ಹೊಕ್ಕಿದ್ದವು. ಆತನನ್ನು ಹೃದಯ ಬಡಿಯುತ್ತಿರಲಿಲ್ಲ ಎಂದು ಗುವಾಹತಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಅಧೀಕ್ಷಕ ಅಭಿಜಿತ್ ಶರ್ಮಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News