ಮಾನನಷ್ಟ ಪ್ರಕರಣ: ಕೇಂದ್ರ ಸಚಿವ ನಾರಾಯಣ ರಾಣೆ, ಪುತ್ರನಿಗೆ ನಿರೀಕ್ಷಣಾ ಜಾಮೀನು

Update: 2022-03-16 18:15 GMT

ಮುಂಬೈ, ಮಾ. 16: ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಕುರಿತು ಮಾನ ಹಾನಿಕರ ಹಾಗೂ ದಾರಿ ತಪ್ಪಿಸುವ ಹೇಳಿಕೆ ನೀಡಿದ ಪ್ರಕರಣದಲ್ಲಿ ಕೇಂದ್ರ ಸಚಿವ ನಾರಾಯಣ ರಾಣೆ ಹಾಗೂ ಅವರ ಪುತ್ರ, ಶಾಸಕ ನಿತೇಶ್ ರಾಣೆಗೆ ಮುಂಬೈಯ ನ್ಯಾಯಾಲಯ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ದಿಂಡೋಶಿ ನ್ಯಾಯಾಲಯ) ಎಸ್.ಯು. ಬಾೇಲೆ ಅವರು ನಾರಾಯಣ ರಾಣೆ ಹಾಗೂ ನಿತೇಶ್ ರಾಣೆಗೆ ನಿರೀಕ್ಷಣಾ ಜಾಮೀನು ನೀಡಿದರು.
ಸಾಲಿಯಾನ್ (28) ಅವರು 2020 ಜೂನ್ 8ರಂದು ಮಲಾಡ್ನ ಉಪ ನಗರದ ಗಗನಚುಂಬಿ ಕಟ್ಟಡವೊಂದರಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. 6 ದಿನಗಳ ಬಳಿಕ ಸುಶಾಂತ್ ಸಿಂಗ್ ರಜಪೂತ್ ಅವರು ಇಲ್ಲಿನ ಬಾಂದ್ರಾ ಪ್ರದೇಶದಲ್ಲಿರುವ ಫ್ಲಾಟ್ ಒಂದರಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಈ ಘಟನೆಗೆ ಸಂಬಂಧಿಸಿ ಕೇಂದ್ರ ಸಚಿವ ನಾರಾಯಣ ರಾಣೆ ಹಾಗೂ ಬಿಜೆಪಿ ಶಾಸಕ ನಿತೇಶ್ ರಾಣೆ ಅವರ ವಿರುದ್ಧ ಇಲ್ಲಿನ ಮಲ್ವಾನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News