ಹರ್ಭಜನ್ ಸಿಂಗ್ ಅವರನ್ನು ರಾಜ್ಯಸಭೆಗೆ ಕಳುಹಿಸಲು ಆಮ್‌ ಆದ್ಮಿ ಪಕ್ಷ ಸಿದ್ಧತೆ?

Update: 2022-03-17 09:02 GMT

ಹೊಸದಿಲ್ಲಿ: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿರುವ ಆಮ್ ಆದ್ಮಿ ಪಕ್ಷವು  ಈ ತಿಂಗಳ ಅಂತ್ಯದ ವೇಳೆಗೆ ರಾಜ್ಯಸಭೆಯಲ್ಲಿ ಐದು ಸ್ಥಾನಗಳನ್ನು ಪಡೆಯಲಿದ್ದು ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರನ್ನು ಈ ವರ್ಷ ರಾಜ್ಯಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಪಂಜಾಬ್ ಅಭ್ಯರ್ಥಿಯನ್ನಾಗಿಸಿ ರಾಜ್ಯಸಭೆಗೆ ಕಳುಹಿಸಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.

ಬುಧವಾರ, ಭಗವಂತ್ ಮಾನ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ ರಾಜ್ಯಸಭೆಗೆ ಕಳುಹಿಸಲು ಶಾರ್ಟ್‌ಲಿಸ್ಟ್ ಮಾಡಿದ ಹೆಸರುಗಳಲ್ಲಿ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರ ಹೆಸರೂ ಇದೆ ಎಂದು ಆಮ್ ಆದ್ಮಿ ಪಕ್ಷದ ಮೂಲಗಳು ತಿಳಿಸಿವೆ.

ಹರ್ಭಜನ್ ಸಿಂಗ್ ಅವರನ್ನು ರಾಜ್ಯದ ಉದ್ದೇಶಿತ ಕ್ರೀಡಾ ವಿಶ್ವವಿದ್ಯಾಲಯದ ಮುಖ್ಯಸ್ಥರನ್ನಾಗಿ ಮಾಡುವ ಸಾಧ್ಯತೆಯಿದೆ.

ಮಾರ್ಚ್ 10 ರಂದು, ಹರ್ಭಜನ್ ಸಿಂಗ್  ಅವರು ಮಾನ್ ಅವರನ್ನು  ಸಿಎಂ ಹುದ್ದೆಗೆ ಏರಿಸಿರುವುದನ್ನು ಟ್ವೀಟ್ ಮೂಲಕ ಸ್ವಾಗತಿಸಿದ್ದರು.

"ನನ್ನ ಸ್ನೇಹಿತ ಭಗವಂತ್ ಮಾನ್  ನಮ್ಮ ಹೊಸ ಮುಖ್ಯಮಂತ್ರಿಯಾಗುತ್ತಿದ್ದಾರೆ. ಅವರಿಗೆ ಅಭಿನಂದನೆಗಳು.  ಹೊಸ ಮುಖ್ಯಮಂತ್ರಿಯಾಗಿ ಭಗತ್ ಸಿಂಗ್ ಅವರ ಗ್ರಾಮ ಖಟ್ಕರ್ಕಲನ್ ಗ್ರಾಮದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದು ಕೇಳಲು ಸಂತೋಷವಾಗಿದೆ'' ಎಂದು ಟ್ವೀಟಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News