×
Ad

ದ.ಕ.ಜಿಲ್ಲೆ: ಐವರಿಗೆ ಕೋವಿಡ್ ಸೋಂಕು

Update: 2022-03-17 17:34 IST

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಗುರುವಾರ ಐದು ಮಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿವೆ. ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ೧,೩೫,೪೬೨ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು ೧,೩೩,೫೯೦ ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಸದ್ಯ ೨೩ ಸಕ್ರಿಯ ಪ್ರಕರಣವಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.೦.೩೫ ದಾಖಲಾಗಿದೆ. ಅಲ್ಲದೆ ಈವರೆಗೆ ೧೮೪೯ ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News