×
Ad

ಮಲ್ಪೆಯಲ್ಲಿ ಹಿಜಾಬ್ ಪರ ಗೋಡೆ ಬರಹ: ಪ್ರಕರಣ ದಾಖಲು

Update: 2022-03-17 21:51 IST

ಮಲ್ಪೆ : ಮಲ್ಪೆ ಸಮೀಪದ ಬೈಲಕೆರೆ ಎಂಬಲ್ಲಿ ಹಿಜಾಬ್ ಪರ ಗೋಡೆ ಬರಹಕ್ಕೆ ಸಂಬಂಧಿಸಿ ಗುರುವಾರ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಟ್ಟಡವೊಂದರ ಗೋಡೆಯಲ್ಲಿ ಹಿಜಾಬ್ ಪರವಾಗಿ ಗೋಡೆ ಬರಹ ಪತ್ತೆಯಾಗಿದ್ದು, ಮಾಹಿತಿ ತಿಳಿದು ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಜಮಾಯಿಸಿ, ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿರುವವರನ್ನು ಬಂಧಿಸುವಂತೆ ಆಗ್ರಹಿಸಿದರು.

ಸ್ಥಳಕ್ಕೆ ಕೂಡಲೇ ಭೇಟಿ ನೀಡಿದ ವೃತ್ತ ನಿರೀಕ್ಷಕ ಶರಣಬಸವ ಪಾಟೀಲ್ ಹಾಗೂ ಮಲ್ಪೆಠಾಣಾಧಿಕಾರಿ ಸಕ್ತಿವೇಲು ಪರಿಸ್ಥಿತಿ ತಿಳಿಗೊಳಿಸಿದರು. ಈ  ಬಗ್ಗೆ ಮಲ್ಪೆ ಪೊಲೀಸ್ ಠಾಣಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News