×
Ad

ಹೋಳಿ ಹಬ್ಬ: ಪ್ರಾಣಿಗಳ ಮೇಲೆ ಬಣ್ಣ ಬಳಸದಿರಲು ಸೂಚನೆ

Update: 2022-03-17 23:18 IST

ಬೆಂಗಳೂರು: ಹೋಳಿ ಹಬ್ಬದ ಸಂದರ್ಭದಲ್ಲಿ ಸಾಕು ಪ್ರಾಣಿಗಳಾದ ನಾಯಿ, ಬೆಕ್ಕು, ಹಸು, ಮೇಕೆ, ಕುರಿ ಇತ್ಯಾದಿಗಳ ಮೇಲೆ ಬಣ್ಣವನ್ನು ಬಳಸದಿರುವಂತೆ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯದರ್ಶಿಗಳು ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಉಪನಿರ್ದೇಶಕ ಡಾ. ಪಿ.ಉಮಾಪತಿ ಪ್ರಕಟನೆ ಹೊರಡಿಸಿದ್ದಾರೆ.

ಜನರ ಮೋಜಿಗಾಗಿ ಆಡುವ ಬಣ್ಣದ ಆಟವು ಪ್ರಾಣಿಗಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಇದನ್ನು ತಡೆಯುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಪ್ರಾಣಿಗಳ ವಿರುದ್ಧ ಕ್ರೌರ್ಯ ತಡೆ ಕಾಯ್ದೆ 1960(PCAACT) ಅನ್ವಯ ಇದು ಕಾನೂನು ಬಾಹಿರವಾಗಿದ್ದು, ಅಂತಹ ಯಾವುದೇ ಪ್ರಕರಣಗಳು ವರದಿಯಾದ್ದಲ್ಲಿ, ಕಾಯ್ದೆಯ ನಿಯಮಗಳ ಅನ್ವಯ ಕ್ರಮ ಜರುಗಿಸಲಾಗುವುದೆಂದು ಅವರು ಎಚ್ಚರಿಕೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News