×
Ad

ಎನ್‌ಎಂಪಿಟಿಗೆ ಉಕ್ಕು ಸಚಿವಾಲಯದ ಕಾರ್ಯದರ್ಶಿ ಭೇಟಿ

Update: 2022-03-18 19:33 IST

ಮಂಗಳೂರು : ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂಜಯ್ ಕುಮಾರ್ ಸಿಂಗ್ ಅವರು ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ (ಎನ್‌ಎಂಪಿಎ)ಗೆ ಭೇಟಿ ನೀಡಿದರು.

ಈ ಸಂದರ್ಭ ಅವರು ಕ್ರೂಸ್ ಟರ್ಮಿನಲ್‌ಗೆ ಭೇಟಿ ನೀಡಿದರಲ್ಲದೆ,  ಬಂದರಿನ ವಿವಿಧ ಮೂಲಸೌಕರ್ಯ ಅಂಶಗಳ ಕುರಿತು ಬಂದರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಉಕ್ಕಿನ ಸಚಿವಾಲಯದ ಕಾರ್ಯದರ್ಶಿಯವರು ಹೊಸ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ಕೆಐಒಸಿಎಲ್‌ನಿಂದ ಕಬ್ಬಿಣದ ಅದಿರು / ಕಚ್ಚಾ ವಸ್ತುಗಳ ಆಮದು ಮತ್ತು ಕಬ್ಬಿಣದ ಅದಿರು ಉಂಡೆಗಳ ರಫ್ತು ನಿರ್ವಹಣೆ ಸೌಲಭ್ಯಗಳನ್ನು ಪರಿಶೀಲಿಸಿದರು ಮತ್ತು ಭವಿಷ್ಯದ ಯೋಜನೆಗಳ ಬಗ್ಗೆ ವಿವರವಾಗಿ ಚರ್ಚಿಸಿದರು.

ನವ ಮಂಗಳೂರು ಬಂದರು ಪ್ರಾಧಿಕಾರದ ಅಧ್ಯಕ್ಷರಾದ ಡಾ. ಎ.ವಿ. ರಮಣ, ಹಾಗೂ ಉಪಾಧ್ಯಕ್ಷ ಕೆ.ಜಿ. ನಾಥ್ ಈ ಸಂದರ್ಭ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News