×
Ad

ಉಕ್ರೇನ್‌ನಲ್ಲಿ ಮೃತಪಟ್ಟ ನವೀನ್‌ ಪಾರ್ಥಿವ ಶರೀರ ಮಾ.21ಕ್ಕೆ ಬೆಂಗಳೂರಿಗೆ: ಮುಖ್ಯಮಂತ್ರಿ ಬೊಮ್ಮಾಯಿ

Update: 2022-03-18 20:15 IST
ನವೀನ್‌ 

ಬೆಂಗಳೂರು: 'ಉಕ್ರೇನ್‌ನಲ್ಲಿ  ಮೃತಪಟ್ಟಿರುವ ಹಾವೇರಿ ಮೂಲದ ವಿದ್ಯಾರ್ಥಿ ನವೀನ್‌ ಗ್ಯಾನಗೌಡರ್ ಮೃತದೇಹ ಸೋಮವಾರ ಬೆಂಗಳೂರಿಗೆ ತಲುಪಲಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಅವರು, "ಇತ್ತೀಚೆಗೆ ಉಕ್ರೇನ್ ನಲ್ಲಿ ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ದಿ. 21-3-2022, ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ" ಎಂದು  ಮಾಹಿತಿ ನೀಡಿದರು. 

ಮಾರ್ಚ್ 1ರಂದು ಉಕ್ರೇನ್‌ನ ಹಾರ್ಕಿವ್‌ನಲ್ಲಿ ಸಂಭವಿಸಿದ ಬಾಂಬ್‌ದಾಳಿಯಲ್ಲಿ ವಿದ್ಯಾರ್ಥಿ ನವೀನ್‌ ಮೃತಪಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News