×
Ad

ಮಾ.20ಕ್ಕೆ ವಸತಿ ಶಾಲೆಗಳಿಗೆ ಪ್ರವೇಶ ಪರೀಕ್ಷೆ

Update: 2022-03-18 21:15 IST

ಉಡುಪಿ : ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ ಪ್ರವೇಶ ಪರೀಕ್ಷೆಯು ಮಾ.20ರ ರವಿವಾರದಂದು ಕಾರ್ಕಳ ಸರಕಾರಿ ಪದವಿ ಪೂರ್ವ ಕಾಲೇಜು, ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜು, ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಉಡುಪಿಯ ಸರ್ವಿಸ್ ಬಸ್‌ನಿಲ್ದಾಣದ ಬಳಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ನಿಷೇಧಾಜ್ಞೆ ಜಾರಿ: ಪರೀಕ್ಷೆಯು ಮಾ.20ರಂದು ಬೆಳಗ್ಗೆ 11ರಿಂದ ಅಪರಾಹ್ನ  1 ಗಂಟೆಯವರೆಗೆ ಕುಂದಾಪುರ, ಕಾರ್ಕಳ, ಕಾಪು ಹಾಗೂ ಉಡುಪಿಯಲ್ಲಿ ನಡೆಯಲಿದ್ದು, ಪರೀಕ್ಷೆ ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಪರೀಕ್ಷೆಗಳು ದೋಷ ರಹಿತವಾಗಿ ನಡೆಸಲು ಹಾಗೂ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ೧೪೪(೧)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News