×
Ad

ಸಮಾಜಕಲ್ಯಾಣ ಇಲಾಖೆಯ ಸ್ಥಗಿತಗೊಂಡಿದ್ದ ಹಲವು ಯೋಜನೆಗಳು ಈ ವರ್ಷದಿಂದ ಮರು ಅನುಷ್ಠಾನ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

Update: 2022-03-18 22:24 IST

ಬೆಂಗಳೂರು, ಮಾ.18: ರಾಜ್ಯದಲ್ಲಿ ಎರಡು ವರ್ಷಗಳಲ್ಲಿ ಕೋವಿಡ್ ಸೋಂಕಿನಿಂದಾಗಿ ಹಿಂದುಳಿದ ವರ್ಗ ಮತ್ತು ಸಮಾಜಕಕಲ್ಯಾಣ ಇಲಾಖೆಯಲ್ಲಿ ಕಡಿತ ಮತ್ತು ಸ್ಥಗಿತಗೊಳಿಸಲಾಗಿದ್ದ ಹಲವು ಯೋಜನೆಗಳನ್ನು ಈ ವರ್ಷದಿಂದ ಮರು ಅನುಷ್ಠಾನ ಮಾಡಲಾಗುತ್ತಿದೆ ಎಂದು ಸಮಾಜಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

ಶುಕ್ರವಾರ ವಿಧಾನ ಪರಿಷತ್ತಿನ ಕಲಾಪದಲ್ಲಿ ಮಾತನಾಡಿದ ಅವರು, ವಿದೇಶಗಳಿಗೆ ವ್ಯಾಸಂಗಕ್ಕೆ ತೆರಳುತ್ತಿರುವ ವಿದ್ಯಾರ್ಥಿಗಳ ಅನುದಾನ ಮತ್ತು ಸೌಲಭ್ಯವನ್ನು ಕಡಿತ ಮಾಡಿದ್ದು, ಅದನ್ನು ಪುನರ್ ಆರಂಭಿಸಲಾಗುವುದು ಎಂದು ಅವರು ತಿಳಿಸಿದರು.

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಲ್ಲಿ ಜಾರಿಯಿದ್ದು ಸ್ಥಗಿತಗೊಂಡ ಯೋಜನೆಗಳನ್ನು ಪುನರ್ ಆರಂಭಿಸಲಾಗುವುದು ಎಂದು ಅವರು ಹೇಳಿದರು.

ಪ್ರಸಕ್ತ ಬಜೆಟ್‍ನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 11 ನಿಗಮಗಳ ಮೂಲಕ 25 ಸಾವಿರ ಯುವಜನರಿಗೆ ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗ ಮುಖಿಯಾಗಿಸುವ ಯೋಜನೆಯನ್ನು ಜಾರಿಗೆ ತರಲು ಅಮೃತ ಮುನ್ನಡೆ ಯೋಜನೆ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News